ಕಾಸರಗೋಡು : ಕಾಳ್ಯಂಗಾಡು ಶ್ರೀ ಮೂಕಾಂಬಿಕಾ ದೇವಾಲಯದಲ್ಲಿ ಗುರುವಾರ ಬ್ರಹ್ಮಕಲಶೋತ್ಸವ ವೈಭವದಿಂದ ನಡೆಯಿತು. ತಂತ್ರಿವರ್ಯ ಶ್ರೀ ಕೃಷ್ಣ ಗುರೂಜಿ ಕುಕ್ಕಾಜೆ ನೇತೃತ್ವ ವಹಿಸಿದ್ದರು. ಈ ಸಂಬಂಧ ಗಣಪತಿ ಹೋಮ, ಸಾಮೂಹಿಕ ಪ್ರಾರ್ಥನೆ, ಕವಾಟೋದ್ಘಾಟನೆ, ನಿತ್ಯ ನೈಮಿತ್ತಿಕೆ ಕಾರ್ಯಗಳ ನಿರ್ಣಯ ಮತ್ತು ಮಹಾಪೂಜೆ ಇತ್ಯಾದಿಗಳು ನಡೆದುವು.
ಮೊಕ್ತೇಸರ ಅಚ್ಯುತ ಕಾಳ್ಯಂಗಾಡು, ಧರ್ಮದರ್ಶಿ ನಾರಾಯಣ ಕಾಳ್ಯಂಗಾಡು, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮತ್ತು ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಡಾ.ಕೆ.ಎನ್.ವೆಂಕಟ್ರಮಣ ಹೊಳ್ಳ, ಸಲಹಾ ಸಮಿತಿಯ ರಘು ಮೀಪುಗುರಿ, ಭಾಸ್ಕರ ಕಾಳ್ಯಂಗಾಡು, ಬ್ರಹ್ಮಕಲಶೋತ್ಸವ ಸಮಿತಿ ಪ್ರದಾನ ಕಾರ್ಯದರ್ಶಿ ದಯಾನಂದ ಕೊಳ್ಕೆಬೈಲು, ಕಾರ್ಯದರ್ಶಿಗಳಾದ ರಂಜಿತ್ ಮನ್ನಿಪ್ಪಾಡಿ, ಗೋವಿಂದ ನಾಯ್ಕ್ ಕಾಳ್ಯಂಗಾಡು, ಕೋಶಾಧಿಕಾರಿ ಶಾಂತಕುಮಾರ್ ಮುಂಡಿತ್ತಡ್ಕ, ಜತೆ ಕೋಶಾಧಿಕಾರಿ ಪುನೀತ್ ಕೆಮ್ಮಣ್ಣು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮೋಹನರಾಜ್ ಕಾಳ್ಯಂಗಾಡು, ಪ್ರಧಾನ ಕಾರ್ಯದರ್ಶಿ ಹರೀಶ್ ಕೆ.ಆರ್., ಮಾತೃ ಸಮಿತಿ ಮತ್ತು ಇತರ ಸಮಿತಿಗಳ ಪದಾಧಿಕಾರಿಗಳು ಮತ್ತು ಸದಸ್ಯರು, ಆಸ್ತಿಕ ಬಾಂಧವರು ಉಪಸ್ಥಿತರಿದ್ದರು. ಇಲ್ಲಿನ ಶ್ರೀ ಸರಸ್ವತಿ ಮಂಟಪದಲ್ಲಿ ವಿವಿಧ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯುತ್ತಿದೆ.

0 Comments