ಬದಿಯಡ್ಕ : ಇತಿಹಾಸ ಪ್ರಸಿದ್ದ ಪೆರಡಾಲ ಶ್ರೀ ಉದನೇಶ್ವರ ಕ್ಷೇತ್ರ ಬ್ರಹ್ಮಕಲಶೋತ್ಸವವು ಜಿಲ್ಲೆಯಲ್ಲಿಯೇ ಗಮನಾರ್ಹವಾಗಿ ಮುಂದುವರಿಯುತ್ತಿದ್ದು 8ನೇ ದಿನ ಮುಸ್ಲಿಂ ಸಮಾಜ ಬಾಂಧವರು ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆಗಳನ್ನು ಸಮರ್ಪಿಸಿ ಸೌಹಾರ್ದತೆಯ ಸಂದೇಶ ಸಾರಿದರು.
ಶುಕ್ರವಾರ ಮಧ್ಯಾಹ್ನ ನಮಾಜು ಕಳೆದ ಬಳಿಕ ಎಲ್ಲರೂ ಒಗ್ಗೂಡಿ ಕ್ಷೇತ್ರಕ್ಕೆ ಭೇಟಿ ನೀಡಿ ಭೋಜನ ಪ್ರಸಾದ ಸ್ವೀಕರಿಸಿದರು. ಬ್ರಹ್ಮಕಲಶೋತ್ಸವ ಸಮಿತಿಯ ವತಿಯಿಂದ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.

0 Comments