ಮಂಗಳೂರು : ಬಿಜೆಪಿಯ ಹಿರಿಯ ನಾಯಕ, ಮೊಗವೀರ ಸಮಾಜದ ಮುಖಂಡ ರಾಮಚಂದ್ರ ಬೈಕಂಪಾಡಿ ಅವರು ವಿಧಿವಶರಾಗಿದ್ದಾರೆ. ಮೊಗವೀರ ಸಮುದಾಯದ ಹಿರಿಯ ರಾಜಕೀಯ ಧುರೀಣರಾಗಿದ್ದ ರಾಮಚಂದ್ರ ಬೈಕಂಪಾಡಿ ಅವರು ಮೀನುಗಾರರ ಸಮಸ್ಯೆಗಳಿಗೆ ದನಿಯಾಗಿ ಹಲವು ಹೋರಾಟಗಳಲ್ಲಿ ಭಾಗಿಯಾಗಿದ್ದರು. ಇವರು ಸರಳ ಸಜ್ಜನ ವ್ಯಕ್ತಿತ್ವದ, ಪರೋಪಕಾರಿ, ಸಾಮಾಜಿಕ ಕಳಕಳಿಯುಳ್ಳ ನಾಯಕರಾಗಿದ್ದರು.
ಮಂಗಳೂರಿನ ಪ್ರಮುಖ ರಂಗಕರ್ಮಿ, ಸಾಹಿತಿ, ಸಾಮಾಜಿಕ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದ ಇವರು ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. 2021 ರಲ್ಲಿ ಪ್ರತಿಷ್ಠಿತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು. ರಾಜ್ಯ ಬಿಜೆಪಿ ಕಾರ್ಯಕಾರಿ ಸದಸ್ಯರಾಗಿ ಸಕ್ರಿಯರಾಗಿದ್ದರು. ರಾಮಚಂದ್ರ ಬೈಕಂಪಾಡಿ ಅವರ ನಿಧನಕ್ಕೆ ಹಲವು ಮಂದಿ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

0 Comments