Ticker

6/recent/ticker-posts

Ad Code

​ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ : ಶಿಕ್ಷಕನ ಬಂಧನ

 

ಚಿತ್ರದುರ್ಗ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿ ಮಾಡಿಸಿ, ಬಳಿಕ ಗರ್ಭಪಾತ ಮಾಡಿಸಿದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕನೋರ್ವನ್ನು ತಳಕು ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಬಂಧಿತ ಆರೋಪಿಯನ್ನು ಡಿಓ ರಾಜಣ್ಣ ಎಂದು ಗುರುತಿಸಲಾಗಿದ್ದು, ಆತ ಹತ್ತನೇ ತರಗತಿಯ ವಿದ್ಯಾರ್ಥಿನಿಯನ್ನು ದುರುಪಯೋಗಪಡಿಸಿಕೊಂಡು ಗರ್ಭಿಣಿ ಮಾಡಿದ್ದಾನೆ ಎನ್ನಲಾಗಿದೆ. ಬಳಿಕ ಪ್ರಕರಣ ಬಯಲಾಗುವ ಭೀತಿಯಿಂದ ಲಕ್ಷ್ಮಿ ಶ್ರೀನಿವಾಸ್ ನರ್ಸಿಂಗ್ ಹೋಂನಲ್ಲಿ ಗರ್ಭಪಾತ ಮಾಡಿಸಿದ ಸಂಗತಿ ತನಿಖೆಯಲ್ಲಿ ಬಹಿರಂಗವಾಗಿದೆ.

ಆರೋಪಿ ಬಂಧನವಾಗುತ್ತಿದ್ದಂತೆ ಗರ್ಭಪಾತ ನಡೆಸಿದರೆಂದು ಆರೋಪಿಸಲಾಗಿರುವ ವೈದ್ಯೆ ಡಾ. ಶಂಕರ್ ಲಕ್ಷ್ಮಿ ನಾಪತ್ತೆಯಾಗಿದ್ದು, ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಇವರ ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ. ತಳಕು ಪೊಲೀಸ್ ಠಾಣೆ ಪಿಎಸ್‌ಐ ಶಿವಕುಮಾ‌ರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ಈ ಸಂಬಂಧ ತಳಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Post a Comment

0 Comments