Ticker

6/recent/ticker-posts

Ad Code

ಪ್ರೀತಿಸಿದ ಯುವತಿಯ ಮಾನಸಿಕ ಕಿರುಕುಳಕ್ಕೆ ಬಲಿಯಾಗಿ ಯುವಕ ಆತ್ಮಹತ್ಯೆ : ಮನೆಯವರ ಆರೋಪ


ಮಂಗಳೂರು:  ಪ್ರೀತಿಸಿದ ಹುಡುಗಿಯ ಮಾನಸಿಕ ಕಿರುಕುಳ ತಾಳಲಾರದೆ 22 ವರ್ಷದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನಿಂದ ವರದಿಯಾಗಿದೆ. ಮಂಗಳೂರಿನ ಮೂಡುಶೆಡ್ಡೆಯ ಎದುರುಪದವು ನಿವಾಸಿ 22 ವರ್ಷದ ಮುಹಮ್ಮದ್ ಆಶಿಕ್, ಕಳೆದ ಮಾರ್ಚ್ 21ರ ಮಧ್ಯರಾತ್ರಿ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಆರಂಭದಲ್ಲಿ ಈ ಸಾವಿಗೆ ನಿಖರ ಕಾರಣ ತಿಳಿದಿರಲಿಲ್ಲ. ಆದರೆ ಆಶಿಕ್‌ನ ಮೊಬೈಲ್ ಪರಿಶೀಲಿಸಿದಾಗ ಸ್ಫೋಟಕ ಸತ್ಯವೊಂದು ಹೊರಬಿದ್ದಿದೆ.

ಆಶಿಕ್ ನಗರದ ಕೂಳೂರಿನ ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿದ್ದಾಗ, ಅದೇ ಕಾಲೇಜಿನ ಉಳ್ಳಾಲ ನಿವಾಸಿ ಸಮೀಯ ಸಬಾ ಎಂಬ ಯುವತಿಯನ್ನು ಪ್ರೀತಿಸುತ್ತಿದ್ದ. ಇಬ್ಬರ ನಡುವೆ ಅನ್ನೋನ್ಯ ಬಾಂಧವ್ಯವಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಸಬಾ ಆಶಿಕ್‌ನಿಂದ ದೂರವಾಗತೊಡಗಿದ್ದಳು ಎನ್ನಲಾಗಿದೆ. ಕೇವಲ ದೂರವಾಗುವುದು ಮಾತ್ರವಲ್ಲದೆ, ಆತನಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದಳು ಎಂಬ ಗಂಭೀರ ಆರೋಪವನ್ನೂ ಆಶಿಕ್ ಮನೆಯವರು ಮಾಡಿದ್ದಾರೆ.

Post a Comment

0 Comments