Ticker

6/recent/ticker-posts

Ad Code

ಶಿಕ್ಷಕರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲು

 

ಚಿಕ್ಕಮಗಳೂರು :  ಶಿಕ್ಷಕರೊಂದಿಗೆ ಈಜುಕೊಳಕ್ಕೆ ತೆರಳಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ  ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರವಿವಾರ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಮೂಲದ ಅನಿಕೇತ್ (14) ಮೃತಪಟ್ಟ ದುರ್ದೈವಿ.

ಜಯಪುರದ ಶ್ರೀ ಸತ್ಯಸಾಯಿ ವಿದ್ಯಾಸಂಸ್ಥೆಯಲ್ಲಿ ಅನಿಕೇತ್ ವ್ಯಾಸಂಗ ಮಾಡುತ್ತಿದ್ದ. ರವಿವಾರ ಮಧ್ಯಾಹ್ನ ಶಿಕ್ಷಕರ ತಂಡದೊಂದಿಗೆ ಈಜುಕೊಳಕ್ಕೆ ತೆರಳಿದ್ದಾಗ ಈ ಅವಘಡ ಸಂಭವಿಸಿದೆ. ಈಜಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಅಸ್ವಸ್ಥಗೊಂಡ ಬಾಲಕನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆತನ ಜೀವ  ಉಳಿಸಲಾಗಲಿಲ್ಲ. ಮೃತ ಅನಿಕೇತ್ ವಿಟ್ಲದ ಕಾಶಿಮಠ ನಿವಾಸಿ ಎಲ್‌ಐಸಿ ಏಜೆಂಟ್   ಗೋವರ್ಧನ್ ನಾಯಕ್ ಅವರ ಪುತ್ರ. ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆ ಮುಗಿಸಿ ಪೋಷಕರಿಗೆ ಮೃತದೇಹ ಹಸ್ತಾಂತರಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Post a Comment

0 Comments