ಕಾಸರಗೋಡು : 10ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮಾಡಿ ಗರ್ಭಿಣಿಯನ್ನಾಗಿ ಮಾಡಿದ ಘಟನೆಯಲ್ಲಿ ಬೇಡಗಂ ಪೊಲೀಸರು ಆಕೆಯ ಸಂಬಂಧಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಬೇಡಗಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಕುತ್ತಿಕೋಲ್ ಪಂಚಾಯತ್ ನಿವಾಸಿ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಲಾಗಿದ್ದು, ಸಂಬಂಧಿಕನ ವಿರುದ್ಧ ಪೋಕ್ಸೊ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಾಲಕಿ ಗರ್ಭಿಣಿಯಾದಾಗ ಅತ್ಯಾಚಾರದ ವಿವರಗಳು ಬೆಳಕಿಗೆ ಬಂದಿದ್ದು, ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

0 Comments