ಬೆಂಗಳೂರು : ಮೊಬೈಲ್ ಫೋನ್ ನಲ್ಲಿ ಮಾತನಾಡುತ್ತಿದ್ದ ಪ್ರತಿಷ್ಠಿತ ಕಂಪೆನಿಯ ಉದ್ಯೋಗಸ್ಥ ಯುವತಿಯೋರ್ವಳು ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ತಾಯಿ ಜೊತೆ ಫೋನ್ ನಲ್ಲಿ ಮಾತನಾಡುತ್ತಿದ್ದ ಯುವತಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬ್ರೈನ್ ಸ್ಟ್ರೋಕ್ ನಿಂದ ಸಾವು ಸಂಭವಿಸಿರಬಹುದೆಂದು ಶಂಕಿಸಲಾಗಿದೆ.
ಹಾಸನ ಮೂಲದ ಶ್ವೇತಾ (25) ಮೃತ ದುರ್ದೈವಿ. ಇವರು ಫೋನ್‌ನಲ್ಲಿ ದೀರ್ಘಕಾಲ ಮಾತನಾಡುತ್ತಿದ್ದ ಸಂದರ್ಭದಲ್ಲೇ ಬ್ರೈನ್ ಸ್ಟ್ರೋಕ್ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಯಾವುದೇ ಆರೋಗ್ಯ ಸಮಸ್ಯೆಗಳಿಲ್ಲದಿದ್ದರೂ, ಯುವತಿ ಈ ರೀತಿ ಪ್ರಾಣ ಕಳೆದುಕೊಂಡಿರುವುದು ಜನತೆಯಲ್ಲಿ ಆತಂಕ ಮೂಡಿಸಿದೆ. ಈ ಘಟನೆ ಅತಿಯಾದ ಫೋನ್ ಬಳಕೆ ಮತ್ತು ಅದರಿಂದ ಹೊರಬರುವ ವಿಕಿರಣಗಳು ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದು ಎಂಬ ಎಚ್ಚರಿಕೆಯನ್ನು ನೀಡಿದೆ. ಕೆಲಸದ ಒತ್ತಡ ಅಥವಾ ವೈಯಕ್ತಿಕ ಸಂಭಾಷಣೆಗಳಿಗಾಗಿ ಗಂಟೆಗಟ್ಟಲೆ ಫೋನ್ ಕಿವಿಗೆ ಅಂಟಿಸಿಕೊಳ್ಳುವವರು ತಮ್ಮ ಆರೋಗ್ಯದ ಬಗ್ಗೆ ಗಮನ ಹರಿಸಬೇಕೆಂದು ತಜ್ಞರು ಸೂಚಿಸಿದ್ದಾರೆ.

0 Comments