Ticker

6/recent/ticker-posts

Ad Code

ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಬಾಲಕ ಮೃತ್ಯು


ಉಡುಪಿ : ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಆರನೇ ತರಗತಿಯ ಬಾಲಕನೋರ್ವ ಮೃತಪಟ್ಟ ದಾರುಣ ಘಟನೆ ನೇಜಾರು ಜ್ಯೋತಿನಗರ ಆರನೇ ಕ್ರಾಸ್ ಸಮೀಪ ನಡೆದಿದೆ. ಹೂಡೆಯ ಸಾಲಿಹಾತ್ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅಬ್ದುಲ್ ರೆಹಮಾನ್ (12) ಮೃತ ದುರ್ದೈವಿ. ನೇಜಾರಿನ ಜ್ಯೋತಿ ನಗರ ಆರನೇ ಕ್ರಾಸ್ ಸಮೀಪ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಕಾರು ಬಡಿದಿದ್ದು ನಂತರ ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ, ಅಲ್ಲಿ ಪರಿಶೀಲಿಸಿದ ವೈದ್ಯರು ಬಾಲಕ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. 
ಮೃತ ವಿದ್ಯಾರ್ಥಿಯ ತಾಯಿ ಶಿಕ್ಷಕಿಯಾಗಿದ್ದು, ತಂದೆ ವಿದೇಶದಲ್ಲಿದ್ದಾರೆ. ಸಾಲಿಹಾತ್ ಶಿಕ್ಷಣ ಸಂಸ್ಥೆಯ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಈತನ ಅಗಲಿಕೆಗೆ ಸಾಲಿಹಾತ್ ಆಡಳಿತ ಮಂಡಳಿ ಆಡಳಿತಾಧಿಕಾರಿಗಳು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

Post a Comment

0 Comments