ನವದೆಹಲಿ : ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಮತ್ತೆ ಕ್ರಮವಾಗಿ ಲೀಟರ್‌ಗೆ 2.61 ಮತ್ತು 2.71 ರೂ. ಹೆಚ್ಚಿಸಲಾಗಿದ್ದು, ಇದು ದೇಶಾದ್ಯಂತ ಇಂಧನ ಬೆಲೆಯಲ್ಲಿ ಕೇಂದ್ರ ಸರ್ಕಾರ 12 ದಿನಗಳಲ್ಲಿ ನಾಲ್ಕನೇ ಏರಿಕೆ ಮಾಡಿದೆ. ಪರಿಷ್ಕೃತ ಪೆಟ್ರೋಲ್, ಡೀಸೆಲ್ ದರ ತಕ್ಷಣದಿಂದಲೇ ಜಾರಿಯಾಗಿದ್ದು, ಆ ಮೂಲಕ ದೆಹಲಿಯಲ್ಲಿಯೇ ಲೀಟರ್ ಪೆಟ್ರೋಲ್ ದರ 100 ರೂ. ಗಡಿ ದಾಟಿದೆ. ರಾಜಧಾನಿಯಲ್ಲಿಂದು ಲೀಟರ್ ಪೆಟ್ರೋಲ್ ದರ 102.12 ರೂ. ಮತ್ತು ಲೀಟರ್ ಡೀಸೆಲ್ ದರ 95.20 ರೂ. ಆಗಿದೆ
ಮೇ 15ರಿಂದ ದರ ಪರಿಷ್ಕರಣೆ ಪುನರಾರಂಭವಾದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಒಟ್ಟು ಸುಮಾರು 7.5 ರೂ. ಏರಿಕೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆ ಹಾಗೂ ರೂಪಾಯಿ ಮೌಲ್ಯ ಕುಸಿತದಿಂದ ತೈಲ ಮಾರುಕಟ್ಟೆ ಕಂಪನಿಗಳ ಆಮದು ವೆಚ್ಚ ಹೆಚ್ಚಾದ ಹಿನ್ನೆಲೆಯಲ್ಲಿ ಈ ದರ ಏರಿಕೆ ಮಾಡಲಾಗಿದೆ ಎಂದು ಸಂಬಂಧಪಟ್ಟವರು ತಿಳಿಸಿದ್ದಾರೆ.
.jpeg)
0 Comments