Ticker

6/recent/ticker-posts

Ad Code

ವಿಶ್ವವ್ಯಾಪಿ ಸಮಾಜ ಬಾಂಧವರನ್ನು ಒಂದೇ ಸೂರಿನಡಿ ತರಲು ಪ್ರಯತ್ನ : ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾಗಿ ಮಾಲಾಡಿ ಅಜಿತ್ ಕುಮಾರ್ ರೈ ಅಭಿಪ್ರಾಯ

 

ಮಂಗಳೂರು : 'ಬಂಟರ ಸಂಘದ ಮಹತ್ವಾಕಾಂಕ್ಷೆಯ  ಯೋಜನೆಯಾದ ಶತಮಾನೋತ್ಸವ ಕಟ್ಟಡ ಸಂಕೀರ್ಣ, ವಿಶ್ವವ್ಯಾಪಿ ಸಮಾಜ ಬಾಂಧವರನ್ನು ಒಂದೇ ಸೂರಿನಡಿ ತರ ಬಯಸುವ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುವುದು ಹಾಗೂ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವೆ' ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾಗಿ ಪುನರಾಯ್ಕೆಗೊಂಡ ಕೆ .ಅಜಿತ್ ಕುಮಾರ್ ರೈ ಹೇಳಿದರು.

ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿ ಹಾಗೂ ವಿದೇಶಗಳಲ್ಲೂ ಸದಸ್ಯರನ್ನು ಒಳಗೊಂಡ ಬಂಟರ ಯಾನೆ ನಾಡವರ ಮಾತೃ ಸಂಘದ 2026 -29ರ ಸಾಲಿಗೆ ಮಾಲಾಡಿ ಅಜಿತ್ ಕುಮಾರ್ ರೈ ಕೊಡಿಯಾಲ್ ಗುತ್ತು ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ.

ಮುಖ್ಯ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ವಕೀಲರಾದ ಉಮೇಶ್ ಶೆಟ್ಟಿ ಶೆಡ್ಡೆ ಹೊಸಲಕ್ಕೆ ಅವರು ಅಧ್ಯಕ್ಷರ ಅವಿರೋಧ ಆಯ್ಕೆಯನ್ನು ಘೋಷಿಸಿದರು. ಉಪ ಚುನಾವಣಾಧಿಕಾರಿ, ವಕೀಲರಾದ ನವೀನ್ ಶೆಟ್ಟಿ ಹಾಗೂ ಚುನಾವಣಾಧಿಕಾರಿ ಸದಾಶಿವ ಶೆಟ್ಟಿಯವರು ಉಪಸ್ಥಿತರಿದ್ದರು.

Post a Comment

0 Comments