ಕಾಸರಗೋಡು : ಅಮೈ ಶ್ರೀ ಕೃಷ್ಣ ಭಜನಾ ಮಂದಿರದ 25 ನೇ ವರ್ಷದ ರಜತ ಮಹೋತ್ಸವದ ಧಾರ್ಮಿಕ ಸಭೆಯಲ್ಲಿ ವೈದಿಕ ಸಮಿತಿ ಅಧ್ಯಕ್ಷ ಡಾl ಕೆ.ಎನ್.ವೆಂಕಟ್ರಮಣ ಹೊಳ್ಳ ಇವರನ್ನು ಸನ್ಮಾನಿಸಲಾಯಿತು. ಜಗದ್ಗುರು ಶಂಕರಾಚಾರ್ಯ ಪೀಠ ಶ್ರೀಮದೆಡನೀರು ಮಠಾಧೀಶರಾದ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಹೊಳ್ಳ ದಂಪತಿಗಳಿಗೆ ಶಾಲು ಹೊದಿಸಿ ಪರಮಪೂಜ್ಯ ತಂತ್ರಿವರ್ಯ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಅಸ್ರ ಇವರು ಹಾರ ತೊಡಿಸಿ ಕೇರಳ ರಾಜ್ಯ ಹಿಂದೂ ಐಕ್ಯವೇದಿ ಇದರ ಕಾರ್ಯಾಧ್ಯಕ್ಷ ವಲ್ಸನ್ ತಿಲ್ಲಂಗೇರಿ ಇವರು ಸ್ಮರಣಿಕೆಯನ್ನಿತ್ತು ಗೌರವಿಸಲಾಯಿತು.
ಈ ಸಂಧರ್ಬದಲ್ಲಿ ರಜತ ಮಹೋತ್ಸವ ಸಮಿತಿ ಅಧ್ಯಕ್ಷ ಕೆ.ಸದಾಶಿವ ಮಲ್ಯ, ಗೌರವಾಧ್ಯಕ್ಷರಾದ ಜಗನ್ನಾಥ್ ವಿಟ್ಲ, ಮಹಿಳಾ ಸಮಿತಿ ಅಧ್ಯಕ್ಷೆ ಶ್ರೀಲತಾ ಟೀಚರ್ ಎಸ್.ವಿ.ಟಿ ಉಪಸ್ಥಿತರಿದ್ದರು. ರಜತ ಮಹೋತ್ಸವದ ಪ್ರಧಾನ ಕಾರ್ಯದರ್ಶಿ ಗುಣಪಾಲ ಅಮೈ ಸ್ವಾಗತಿಸಿ, ಸಾಂಸ್ಕ್ರತಿಕ ಸಮಿತಿ ಸಂಚಾಲಕ ರಾಜೇಶ್ ಅಮೈ ಕಾರ್ಯಕ್ರಮ ನಿರೂಪಿಸಿ ಮಂದಿರದ ಕಾರ್ಯದರ್ಶಿ ರಾಮಚಂದ್ರ ಅಮೈ ವಂದಿಸಿದರು.

0 Comments