ದಿಸ್ಪುರ : ಅಸ್ಸಾಂ ರಾಜ್ಯದ ನೂತನ ಸಿಎಂ ಆಗಿ ಹಿಮಂತ ಬಿಸ್ವಾ ಶರ್ಮಾ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಖಾನಾಪಾರಾದ ವೆಟರಿನರಿ ಕಾಲೇಜು ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಹಿಮಂತ ಬಿಸ್ವಾ ಶರ್ಮಾ ಸತತ 2ನೇ ಬಾರಿಗೆ ಅಸ್ಸಾಂ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ರಾಜಭವನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರು ಹಿಮಂತ ಬಿಸ್ವ ಶರ್ಮ ಅವರಿಗೆ ಹುದ್ದೆ ಮತ್ತು ಗೌಪ್ಯತಾ ಪ್ರಮಾಣವಚನ ಬೋಧಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಲು ಖಾನಾಪಾರಾದ ವೆಟರಿನರಿ ಕಾಲೇಜು ಮೈದಾನಕ್ಕೆ ಆಗಮಿಸಿದ್ದರು. ಪ್ರಮಾಣವಚನ ಸ್ವೀಕರಿಸಿದ ಬಳಿಕ ಹಿಮಂತ ಬಿಸ್ವ ಶರ್ಮ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದಿಸಿದರು.
ಪ್ರಧಾನಿ ಮೋದಿ ಮಾತ್ರವಲ್ಲದೇ ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಸರ್ಬಾನಂಜ ಸೋನಾವಾಲ್, ಪಬಿತ್ರಾ ಮಾರ್ಗೆರಿಟಾ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು. ಮಾತ್ರವಲ್ಲದೇ ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಬಿಜೆಪಿ ಅಧ್ಯಕ್ಷ ನಿತಿನ್ ನಿಬಿನ್ ಕೂಡ ಪ್ರಮಾಣವಚನ ಸಮಾರಂಭದಲ್ಲಿ ಉಪಸ್ಥಿತರಿದ್ದರು.

0 Comments