Ticker

6/recent/ticker-posts

Ad Code

ಲಾರಿಗೆ ಬೊಲೆರೋ ಡಿಕ್ಕಿ ಒಂದೇ ಕುಟುಂಬದ ಐವರು ದಾರುಣ ಮೃತ್ಯು

 

ಚಿತ್ರದುರ್ಗ : ರಸ್ತೆಬದಿ ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿಯಾಗಿ ಸ್ಥಳದಲ್ಲೇ ಐವರು ದುರ್ಮರಣಕ್ಕೀಡಾದ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೈರಾಪುರ ಗ್ರಾಮದ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಬೊಲೆರೋ ವಾಹನ ಅತಿ ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ, ವಾಹನದಲ್ಲಿದ್ದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಳ್ಳಾರಿ ಮೂಲದ ವೆಂಕಟೇಶ್(28), ಶಿವಮ್ಮ(25), ಮೀನಾಕ್ಷಿ(16), ಪೂಜಾ (4), ಪರುಶುರಾಮ (1.5) ಮೃತರಾದವರೆಂದು ಗುರುತಿಸಲಾಗಿದೆ. ಮೊಳಕಾಲ್ಮೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಘಟನಾ ಸ್ಥಳಕ್ಕೆ ಮೊಳಕಾಲ್ಮೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Post a Comment

0 Comments