ಕಾಸರಗೋಡು : ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ವ್ಯಕ್ತಿಯೊಬ್ಬ ಯುವತಿಯನ್ನು ಮದುವೆಯಾಗುವುದಾಗಿ ಭರವಸೆ ನೀಡಿ 34,30,000 ರೂ. ಮತ್ತು ಚಿನ್ನಾಭರಣಗಳನ್ನು ವಂಚಿಸಿದ್ದಾನೆ ಎಂದು ದೂರಲಾಗಿದೆ. ಪ್ರಕರಣದಲ್ಲಿ ತಳಿಪರಂಬ ಪೊಲೀಸರು ಡಾ. ಆಂಟೋನಿ ಆಗಸ್ಟಿನ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ತಳಿಪರಂಬದ ರಾಜರಾಜೇಶ್ವರ ದೇವಸ್ಥಾನದ ಬಳಿ ಯುವತಿಯೊಬ್ಬಳು ನೀಡಿದ ದೂರಿನ ಮೇರೆಗೆ ಈ ಪ್ರಕರಣ ದಾಖಲಾಗಿದೆ. ಜನವರಿ 2021 ರಲ್ಲಿ ಇಸ್ರೇಲ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ವಂಚಿಸುವ ಉದ್ದೇಶದಿಂದ ಫೇಸ್‌ಬುಕ್ ಮೂಲಕ ಪರಿಚಯಿಸಿಕೊಂಡು ಮದುವೆಯಾಗುವುದಾಗಿ ಭರವಸೆ ನೀಡಿದ ನಂತರ, ಆಂಟನಿ ಅಗಸ್ಟೀನ್ ನೇರವಾಗಿ ಮತ್ತು ಬ್ಯಾಂಕ್ ವರ್ಗಾವಣೆಯ ಮೂಲಕ ಹಲವಾರು ಕಂತುಗಳಲ್ಲಿ ಹಣವನ್ನು ಪಡೆದ. ಆಮೇಲೆ ಮದುವೆ ಆಗಲಿಲ್ಲ. ಹಣವನ್ನೂ ಹಿಂದಿರುಗಿಸಲಿಲ್ಲ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

0 Comments