Ticker

6/recent/ticker-posts

Ad Code

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೇ ಇದೀಗ ಸಿಎನ್‌ಜಿ ಬೆಲೆಯನ್ನು ಪ್ರತಿ ಕೆಜಿಗೆ 2 ರೂಪಾಯಿ ಏರಿಕೆ

 

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆನ್ನಲ್ಲೇ ಈಗ ಸಂಕುಚಿತ ನೈಸರ್ಗಿಕ ಅನಿಲ ದರವೂ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಿಎನ್‌ಜಿ ಬೆಲೆಯನ್ನು ಪ್ರತಿ ಕೆಜಿಗೆ 2 ರೂಪಾಯಿ ಹೆಚ್ಚಿಸಲಾಗಿದೆ.

ಬೆಲೆ ಏರಿಕೆಯ ನಂತರ ದೆಹಲಿಯಲ್ಲಿ ಸಿಎನ್‌ಜಿ ದರ ಪ್ರತಿ ಕೆಜಿಗೆ 77.09 ರೂಪಾಯಿಯಿಂದ 79.09 ರೂಪಾಯಿಗೆ ಏರಿಕೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಸಾರಿಗೆ ವೆಚ್ಚಗಳು ಹೆಚ್ಚುತ್ತಿರುವ ಬೆನ್ನಲ್ಲೇ ಈ ದರ ಏರಿಕೆಯು ಜನಸಾಮಾನ್ಯರಿಗೆ ಅದರಲ್ಲೂ ವಿಶೇಷವಾಗಿ ಆಟೋ, ಟ್ಯಾಕ್ಸಿ ಮತ್ತು ವಾಣಿಜ್ಯ ವಾಹನ ಸವಾರರಿಗೆ ಭಾರಿ ಹೊರೆಯಾಗಿ ಪರಿಣಮಿಸಿದೆ.

Post a Comment

0 Comments