ಕಾಸರಗೋಡು : ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕಾಸರಗೋಡು ಜಿಲ್ಲಾ ಸಮಿತಿ ಆಶ್ರಯದಲ್ಲಿ ಪತ್ರಕರ್ತರ ಮಕ್ಕಳಿಗೆ ಕಲಿಕೋಪಕರಣ ವಿತರಣೆ, ಕೃತಿ ಪರಿಚಯ ಕಾರ್ಯಕ್ರಮ ಮೇ 30ರಂದು ಬೆಳಗ್ಗೆ 10ರಿಂದ ಉಪ್ಪಳ ವ್ಯಾಪಾರಿ ಭವನದಲ್ಲಿ ನಡೆಯಲಿದೆ. ಮಾಜಿ ಶಾಸಕ, ಮೆಸ್ಕಾಂ ಮಂಗಳೂರು ಅಧ್ಯಕ್ಷ ಕೆ.ಹರೀಶ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸುವರು. ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು ಅಧ್ಯಕ್ಷತೆ ವಹಿಸುವರು. ಲೇಖಕ ಶಾಫಿ ಬಂಡಸಾಲ ದುಬೈ ಅವರ ಮನದ ಮಾತು ಕೃತಿ ಪರಿಚಯ, ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್ ಸನ್ಮಾನಿಸುವರು. ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ, ಸಾಹಿತಿ ರಾಧಾಕೃಷ್ಣ ಕೆ.ಉಳಿಯತ್ತಡ್ಕ ಕೃತಿ ಪರಿಚಯಿಸುವರು. ಮಂಗಲ್ಪಾಡಿ ಗ್ರಾಪಂ ಅಧ್ಯಕ್ಷ ಗೋಲ್ಡನ್ ಅಬ್ದುಲ್ ರಹ್ಮಾನ್, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು ಸಂಸ್ಥಾಪಕ ಎಸ್.ಪ್ರದೀಪ್ ಕುಮಾರ್ ಕಲ್ಕೂರ, ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕ ಅಧ್ಯಕ್ಷ ಡಾ.ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಗಮಕ ಕಲಾ ಪರಿಷತ್ತು ಕಾಸರಗೋಡು ಅಧ್ಯಕ್ಷ ತೆಕ್ಕೆಕೆರೆ ಶಂಕರನಾರಾಯಣ ಭಟ್, ಸಾಮಾಜಿಕ ಕಾರ್ಯಕರ್ತೆ ಸುಜಾತ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಕರ್ನಾಟಕ ಗಡಿ ಅಭಿವೃಧ್ಧಿ ಪ್ರಾಧಿಕಾರದ ಸದಸ್ಯ, ಸಂಘದ ಗೌರವಾಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ, ಪ್ರಧಾನ ಕಾರ್ಯದರ್ಶಿ ಕೆ.ಗಂಗಾಧರ ತೆಕ್ಕೆಮೂಲೆ, ಖಜಾಂಚಿ ಶ್ರೀಕಾಂತ್ ಕೆ.ಎಸ್., ಪುರುಷೋತ್ತಮ ಭಟ್ ಪೈವಳಿಕೆ ಮತ್ತಿತರರು ಉಪಸ್ಥಿತರಿರುವರು.

0 Comments