Ticker

6/recent/ticker-posts

Ad Code

ಈಜಲು ಹೋಗಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ಮೃತ್ಯು

 

ಮಂಗಳೂರು : ನದಿಯಲ್ಲಿ ಈಜಲು ಹೋಗಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಪಜಿರಡ್ಕದ ಬಳಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಬೆಳಗಾವಿ ಜಿಲ್ಲೆಯ ಗೋಕಾಕ್ ನಿವಾಸಿ ಶ್ರೀಪೂರ್ಣ (21) ಎಂದು ಗುರುತಿಸಲಾಗಿದೆ. ಇವರು ಉಜಿರೆಯ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದಾರೆ. 

ಮಂಗಳವಾರ ಸಂಜೆ ಏಳು ಜನ ಸ್ನೇಹಿತರ ತಂಡ ನೇತ್ರಾವತಿ ನದಿಗೆ  ಈಜಾಡಲು ತೆರಳಿತ್ತು. ಈ ವೇಳೆ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಮೃತದೇಹ ಪತ್ತೆ ಹಚ್ಚಲು ಸ್ಥಳೀಯರು, ಅಗ್ನಿಶಾಮಕ ದಳ ಹಾಗೂ ಶೌರ್ಯ ವಿಪತ್ತು ಪಡೆ ಶೋಧ ನಡೆಸುತ್ತಿದೆ. ಬೆಳ್ತಂಗಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Post a Comment

0 Comments