Ticker

6/recent/ticker-posts

Ad Code

ಬೆಂಗಳೂರಿನ ಶಾಲೆಯಲ್ಲಿ ಭಾರೀ ಅಗ್ನಿ ದುರಂತ

 

ಬೆಂಗಳೂರು : ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ತರಗತಿ ನಡೆಯುತ್ತಿದ್ದ ವೇಳೆಯೇ ಶಾಲಾ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಕೆಂಗೇರಿ ಸಮೀಪವಿರುವ ನಾಗದೇವನಹಳ್ಳಿಯ ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಸಂಭವಿಸಿದೆ.

ಶಾಲಾ ಕಟ್ಟಡದ 3 ಮತ್ತು 4ನೇ ಮಹಡಿಯಲ್ಲಿ ಬೆಂಕಿ ಅವಘಡ ಸಂಭವಿಸುತ್ತಿದ್ದಂತೆ ಶಿಕ್ಷಕರು ಎಲ್ಲಾ ಮಕ್ಕಳನ್ನು ಹೊರಗೆ ಕಳುಹಿಸಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು  ದೌಡಾಯಿಸಿದ್ದು, ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದ್ದಾರೆ. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. 

ಸುಮಾರು 2 ಸಾವಿರ ಮಕ್ಕಳು ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಇಂದು ಬೆಳಗ್ಗೆ 9 ಗಂಟೆಗೆ ಎಂದಿನಂತೆ ಶಾಲೆ ಪ್ರಾರಂಭವಾಗಿದೆ. 10:15 ರ ಸುಮಾರಿಗೆ ಶಾಲೆಯ 4ನೇ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಎಚ್ಚೆತ್ತ ಶಾಲಾ ಸಿಬ್ಬಂದಿ ಎಲ್ಲಾ ಮಕ್ಕಳನ್ನು  ಹೊರಗೆ ಕಳುಹಿಸಿದ್ದಾರೆ. ಇದರಿಂದ ಭಾರೀ ದುರಂತವೊಂದು ತಪ್ಪಿದೆ.

Post a Comment

0 Comments