Ticker

6/recent/ticker-posts

Ad Code

ಕಾಸರಗೋಡು ಸಹಿತ ಆರು ಜಿಲ್ಲೆಗಳಲ್ಲಿ ಭಾರೀ ಮಳೆಗೆ ಸಾಧ್ಯತೆ : ಎಲ್ಲೊ ಆಲರ್ಟ್

 

ತಿರುವನಂತಪುರ : ರಾಜ್ಯದಲ್ಲಿ ಇಂದು  ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಕೇರಳದ ಆರು ಜಿಲ್ಲೆಗಳಲ್ಲಿ ಇಂದು ಹಳದಿ ಎಚ್ಚರಿಕೆ ನೀಡಲಾಗಿದೆ. ಕಾಸರಗೋಡು, ಕಣ್ಣೂರು ಸಹಿತ ಇಡುಕ್ಕಿ, ಎರ್ನಾಕುಲಂ, ಮಲಪ್ಪುರ ಮತ್ತು ಕೋಯಿಕ್ಕೋಡ್ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ. ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಮತ್ತು ಗಂಟೆಗೆ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಪಾಲಕ್ಕಾಡ್, ಮಲಪ್ಪುರಂ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ  ಗಂಟೆಗೆ 100 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ. 

ಪಾಲಕ್ಕಾಡ್, ಮಲಪ್ಪುರ, ಕೋಯಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಇಂದು ಮತ್ತು ಶನಿವಾರ ತ್ರಿಶೂರ್, ಪಾಲಕ್ಕಾಡ್ ಮತ್ತು ಮಲಪ್ಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಮುಂದಿನ 4 ದಿನಗಳವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Post a Comment

0 Comments