ಬೆಂಗಳೂರು : ರಾಜ್ಯದ ಶಾಲೆ ಮತ್ತು ಕಾಲೇಜುಗಳಲ್ಲಿ ವಿವಾದಕ್ಕೆ ಕಾರಣವಾಗಿದ್ದ ವಸ್ತ್ರಸಂಹಿತೆಯ ನಿಯಮಗಳನ್ನು ರಾಜ್ಯ ಸರ್ಕಾರ ಸಡಿಲಗೊಳಿಸಿದೆ. ಸಿದ್ದರಾಮಯ್ಯ ಸರ್ಕಾರವು ಬುಧವಾರ ಹೊಸ ಆದೇಶ ಹೊರಡಿಸಿದ್ದು, ವಿದ್ಯಾರ್ಥಿಗಳು ಸಮವಸ್ತ್ರದ ಜೊತೆಗೆ ಹಿಜಾಬ್, ಜನಿವಾರ ಸೇರಿದಂತೆ ತಮ್ಮ ಧಾರ್ಮಿಕ ಪದ್ಧತಿಗನುಗುಣವಾದ ಸಂಕೇತಗಳನ್ನು ಧರಿಸಲು ಮುಕ್ತ ಅವಕಾಶ ಕಲ್ಪಿಸಿದೆ. 1ನೇ ತರಗತಿಯಿಂದ 12ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಈ ಹೊಸ ನಿಯಮ ಅನ್ವಯವಾಗಲಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರಲಿದೆ.
ಸಮವಸ್ತ್ರ ವಿಚಾರವಾಗಿ 2022ರ ಆದೇಶ ಹಿಂಪಡೆದು ಹೊಸ ಆದೇಶ ಜ್ಯಾರಿಗೊಳಿಸಲಾಗಿದೆ. ಸಾಂಪ್ರದಾಯಿಕ ಹಾಗೂ ಪದ್ಧತಿ ಆಧಾರಿತವಾದ ಸಂಕೇತಗಳ ವಸ್ತ್ರಗಳಿಗೆ ಅವಕಾಶ ನೀಡಿ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಬಿಜೆಪಿ ಸರಕಾರ ಹೊರಡಿಸಿದ್ದ ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆದುಕೊಂಡ ಸಿದ್ದರಾಮಯ್ಯ ಸರ್ಕಾರ ಹಿಜಾಬ್, ಜನಿವಾರ, ರುದ್ರಾಕ್ಷಿಗೂ ಅವಕಾಶ ಕಲ್ಪಿಸಿದೆ.

0 Comments