ಕಾಸರಗೋಡು : ಕಾಳ್ಯಂಗಾಡು ಶ್ರೀ ಮೂಕಾಂಬಿಕಾ ದೇವಾಲಯದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವಕ್ಕೆ ಕೂಡ್ಲು ಕುತ್ಯಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದಿಂದ ಹುಲ್ಪೆ ಸಮರ್ಪಣೆ ನಡೆಯಿತು. ವರ್ಣರಂಜಿತ ಮೆರವಣಿಗೆಯಲ್ಲಿ ಮುತ್ತುಕೊಡೆ, ವಾದ್ಯಘೋಷ, ಸಮವಸ್ತ್ರಧಾರಿಣಿ ಮಹಿಳೆಯರು, ಮಕ್ಕಳು, ಮಹನೀಯರು ಗಮನ ಸೆಳೆದರು.
ದೇವಾಲಯದ ಮೊಕ್ತೇಸರ ಅಚ್ಯುತ ಕಾಳ್ಯಂಗಾಡು, ಧರ್ಮದರ್ಶಿ ನಾರಾಯಣ ಕಾಳ್ಯಂಗಾಡು, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ.ಕೆ.ಎನ್.ವೆಂಕಟ್ರಮಣ ಹೊಳ್ಳ, ಪ್ರಧಾನ ಕಾರ್ಯದರ್ಶಿ ದಯಾನಂದ ಕೊಳ್ಕೆಬೈಲು, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿಗಳಾದ ರಂಜಿತ್ ಮನ್ನಿಪ್ಪಾಡಿ, ಗೋವಿಂದ ನಾಯ್ಕ್ ಕಾಳ್ಯಂಗಾಡು, ಕೋಶಾಧಿಕಾರಿ ಶಾಂತ ಕುಮಾರ್, ಜತೆ ಕಾರ್ಯದರ್ಶಿ ಪುನೀತ್ ಕೆಮ್ಮಣ್ಣು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮೋಹನರಾಜ್ ಕಾಳ್ಯಂಗಾಡು, ಪ್ರಧಾನ ಕಾರ್ಯದರ್ಶಿ ಹರೀಶ್ ಕೆ.ಆರ್, ರಘು ಮೀಪುಗಿರಿ ಮೊದಲಾದವರು ದೇವಾಲಯ ಮುಂಭಾಗದಲ್ಲಿ ಹುಲ್ಪೆ ಮೆರವಣಿಗೆಯನ್ನು ಸ್ವಾಗತಿಸಿದರು.

0 Comments