Ticker

6/recent/ticker-posts

Ad Code

ಮಾಜಿ ಸಂಸದ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಕೆ.ಪಿ. ಧನಪಾಲನ್ ನಿಧನ

 

ಕೊಚ್ಚಿ : ಮಾಜಿ ಸಂಸದ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಕೆ.ಪಿ ಧನಪಾಲನ್ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದ ಅವರು ಪರವೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತದೇಹ ಉತ್ತರ ಪರವೂರಿನ ಆಸ್ಪತ್ರೆಯಲ್ಲಿದೆ.

ಚಾಲಕುಡಿಯ ಮಾಜಿ ಲೋಕಸಭಾ ಸದಸ್ಯ. ಯುವ ಕಾಂಗ್ರೆಸ್‌ನ ರಾಜ್ಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಧನಪಾಲ್ ಅವರು 2001ರಿಂದ ಆರು ವರ್ಷಗಳವರೆಗೆ ಎರ್ನಾಕುಲಂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಕೆಲಸ ಮಾಡಿದರು. 2014ರಲ್ಲಿ ತ್ರಿಶೂರ್‌ನಿಂದ ಲೋಕಸಭೆಗೆ ಸ್ಪರ್ಧಿಸಿ ಸೋತಿದ್ದರು. ಪರವೂರು ನಗರಸಭೆ ಸದಸ್ಯರಾಗಿ, ಮಿಲ್ಮಾ ಅಧ್ಯಕ್ಷರಾಗಿ, ಉತ್ತರ ಮಲಬಾರ್ ಗ್ರಾಮೀಣ ಬ್ಯಾಂಕ್ ಆಡಳಿತ ಮಂಡಳಿ ಸದಸ್ಯರಾಗಿಯೂ ಕೆಲಸ ಮಾಡಿದ್ದಾರೆ.

Post a Comment

0 Comments