Ticker

6/recent/ticker-posts

Ad Code

ಮಹಿಳೆಯ ಉಸಿರುಗಟ್ಟಿಸಿ ಸೂಟ್‌ಕೇಸ್‌ನಲ್ಲಿ ಹಾಕಿ ಸಾಗಿಸಲು ಯತ್ನಿಸಿದ್ದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

 

ಉಡುಪಿ : ಮಹಿಳೆಯೋರ್ವಳನ್ನು ಕೊಲೆಗೆ ಯತ್ನಿಸಿದ ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದೆ. ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ ನಡೆದ ಮಹಿಳೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಬೆಳ್ತಂಗಡಿ ನಿವಾಸಿ ಮಿಥುನ್ ಹಾಗೂ ನಾಗೇಶ್ ಪೂಜಾರಿ ಶಿಕ್ಷೆಗೆ ಗುರಿಯಾದ ಆರೋಪಿಗಳು. 

2022ರ ಫೆಬ್ರವರಿ 18ರಂದು ಮಂಚಿಕುಮೇರಿ ನಿವಾಸಿ ರಮಾನಾಥ ರೈ ಅವರ ಪತ್ನಿ ಸುಮತಿ ಮನೆಯಲ್ಲಿ ಒಬ್ಬರೇ ಇದ್ದಾಗ ಅವರ ಅಕ್ಕನ ಮಗ ಮಿಥುನ್ ಹಾಗೂ ಅವನ ಸ್ನೇಹಿತ ನಾಗೇಶ್ ಮನೆಗೆ ಬಂದು ಬೆಲ್ ಮಾಡಿದರು. ಪರಿಚಿತರಾದ ಕಾರಣ ಸುಮತಿ ಬಾಗಿಲು ತೆರೆದಿದ್ದು, ಒಳಗೆ ಪ್ರವೇಶಿಸಿದ ಇಬ್ಬರೂ ಸೇರಿ ಅವರನ್ನು ಗಟ್ಟಿಯಾಗಿ ಹಿಡಿದು ಕುತ್ತಿಗೆ ಹಿಚುಕಿದರು. ಇದರಿಂದ ಸುಮತಿ ಪ್ರಜ್ಞೆ ತಪ್ಪಿದರು. ಆ ಬಳಿಕ ಆರೋಪಿಗಳು ಅವರನ್ನು ಚೀಲದಲ್ಲಿ ಹಾಕಿ ಸೂಟ್‌ಕೇಸ್‌ನಲ್ಲಿ ತುಂಬಿಸಿ ಸಾಗಿಸಲು ಯತ್ನಿಸುತ್ತಿದ್ದ ವೇಳೆ ರಮಾನಾಥ ರೈ ಹಾಗೂ ಅಕ್ಕಪಕ್ಕದವರು ಮನೆಗೆ ಬಂದು ಬಾಗಿಲು ತಟ್ಟಿದರು. ಈ ವೇಳೆ ಆರೋಪಿಗಳು ಬಾಗಿಲು ತೆರೆದು ಹೊರಗೆ ಓಡಲು ಯತ್ನಿಸಿದಾಗ ಸಾರ್ವಜನಿಕರು ಅವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು.

Post a Comment

0 Comments