ತಿರುವನಂತಪುರ : ಮಿಲ್ಮಾ ಹಾಲಿನ ಬೆಲೆಯನ್ನು ಲೀಟರ್‌ಗೆ 4 ರೂ. ಹೆಚ್ಚಿಸಲಾಗಿದೆ. ಈ ಬಗ್ಗೆ ನಡೆದ ಮಿಲ್ಮಾ ನಿರ್ದೇಶಕರ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜೂನ್ 1 ರಿಂದ ಬೆಲೆ ಏರಿಕೆ ಜಾರಿಗೆ ಬರಲಿದೆ ಎಂದು ನಿರ್ದೇಶಕರ ಮಂಡಳಿ ತಿಳಿಸಿದೆ. ಈ ನಿಟ್ಟಿನಲ್ಲಿ ಮೊದಲೇ ನಿರ್ಧಾರ ತೆಗೆದುಕೊಳ್ಳಲಾಗಿದ್ದರೂ, ಚುನಾವಣೆ ಮುಗಿಯುವವರೆಗೆ ಕಾಯಲಾಗಿತ್ತು. ಈ ನಿರ್ಧಾರವನ್ನು ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರಿಗೆ ತಿಳಿಸಲಾಗಿದೆ ಎಂದು ಮಿಲ್ಮಾ ನಿರ್ದೇಶಕರು ತಿಳಿಸಿದ್ದಾರೆ.
ರಾಜ್ಯದಲ್ಲಿ ಉತ್ಪಾದನಾ ವೆಚ್ಚ ನಿರಂತರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಹೆಚ್ಚಿದ ಮೊತ್ತದ ಅಧಿಕ ಪಾಲು ನೇರವಾಗಿ ಹಾಲು ಉತ್ಪಾದಕರಿಗೆ ತಲುಪುವಂತೆ ಹೊಸ ವ್ಯವಸ್ಥೆ ಮಾಡಲಾಗಿದೆ ಎನ್ನಲಾಗಿದೆ.

0 Comments