Ticker

6/recent/ticker-posts

Ad Code

ಪ್ರೌಢಶಾಲೆಗಳಲ್ಲಿ ಶಿಕ್ಷಕರು ಕೆಲಸದ ಸಮಯದಲ್ಲಿ ಮೊಬೈಲ್ ಫೋನ್ ಬಳಕೆಗೆ ನಿಷೇಧ


ಕಾಸರಗೋಡು : ಪ್ರೌಢಶಾಲೆಗಳಲ್ಲಿ ಶಿಕ್ಷಕರು ಕೆಲಸದ ಸಮಯದಲ್ಲಿ ಮೊಬೈಲ್ ಫೋನ್ ಬಳಸುವುದನ್ನು ಶಿಕ್ಷಣ ಇಲಾಖೆ ಕಟ್ಟುನಿಟ್ಟಾಗಿ ನಿಷೇಧಿಸಿದೆ. ಕಾಸರಗೋಡು ಜಿಲ್ಲಾ ಶಿಕ್ಷಣಾಧಿಕಾರಿ ಈ ಸಂಬಂಧ ಅಧಿಕೃತ ಆದೇಶ ಹೊರಡಿಸಿದ್ದಾರೆ. ಶಾಲೆಗಳಲ್ಲಿ ಕಲಿಕಾ ವಾತಾವರಣವನ್ನು ಸುಧಾರಿಸುವ ಮತ್ತು ತರಗತಿಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡುವ ಭಾಗವಾಗಿ ಹೊಸ ಕ್ರಮ ಕೈಗೊಳ್ಳಲಾಗಿದೆ. ಹೊಸ ಆದೇಶದ ಪ್ರಕಾರ, ಶಿಕ್ಷಕರು ಯಾವುದೇ ಸಂದರ್ಭದಲ್ಲೂ ತರಗತಿ ಕೊಠಡಿಗಳಿಗೆ ಮೊಬೈಲ್ ಫೋನ್ ತೆಗೆದುಕೊಂಡು ಹೋಗಲು ಅವಕಾಶವಿಲ್ಲ. ಆಯಾ ಶಾಲೆಗಳ ಮುಖ್ಯ ಶಿಕ್ಷಕರು ಶಾಲೆಗಳ ಎಲ್ಲಾ ಶಿಕ್ಷಕರು ಈ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಬೇಕು ಇಲ್ಲದಿದ್ದರೆ ಕ್ರಮ ಕೈಗೊಳ್ಳಲಾಗುವುದೆಂದು ಸೂಚಿಸಲಾಗಿದೆ.

Post a Comment

0 Comments