Ticker

6/recent/ticker-posts

Ad Code

ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಮಣ್ಯ ದೇವಸ್ಥಾನ ವಾರ್ಷಿಕ ಪ್ರತಿಷ್ಠಾ ಮಹೋತ್ಸವ ಸಂಪನ್ನ


ಕಾಸರಗೋಡು : ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಮಣ್ಯ ದೇವಸ್ಥಾನ ವಾರ್ಷಿಕ ಪ್ರತಿಷ್ಠಾ ಬ್ರಹ್ಮಕಲಶೋತ್ಸವ  ವಿಜೃಂಭಣೆಯಿಂದ ನಡೆಯಿತು. ಇದರ ಅಂಗವಾಗಿ ಚಂಡಿಕಾ ಹೋಮ, ಶುದ್ದಿ ಕಲಶಾಭಿಷೇಕ, ಕ್ಷೇತ್ರ ತಂತ್ರಿಗಳಾದ ಕೆ. ಯು. ಪದ್ಮನಾಭ ತಂತ್ರಿಗಳ ನೆತೃತ್ವದಲ್ಲಿ ನಡೆಯಿತು. ಲಲಿತಾ ಸಹಸ್ರನಾಮ ಪಾರಾಯಣ, ಭಜನೆ, ಶ್ರೀ ಮಹಾತಾಯಿಯ ದರ್ಶನ ಸೇವೆ, ಪ್ರಸಾದ ವಿತರಣೆ, ಅನ್ನಪ್ರಸಾದ ವಿತರಣೆ ನಡೆಯಿತು. ಕಾಸರಗೋಡು ಕೋಟೆ ನಾಯಕರ ಕುಟುಂಬಸ್ಥರು, ಊರ ಪರವೂರ ನೂರಾರು ಭಕ್ತ ಬಾಂಧವರಿಗೆ ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಮಣ್ಯ ದೇವಸ್ಥಾನ ಸಮಿತಿ ಅಧ್ಯಕ್ಷ ನಾಗೇಶ್ ನಾಯಕರು  ಶುಭ ಹಾರೈಸಿದರು. ಗೌರವಾಧ್ಯಕ್ಷ ಕನ್ನಡ ಭವನದ ಡಾ. ವಾಮನ್ ರಾವ್ ಬೇಕಲ್ ಸಹಿತ ಹಲವು ಗಣ್ಯರು, ಭಕ್ತರು ಉಪಸ್ಥಿತರಿದ್ದರು.

Post a Comment

0 Comments