ತಿರುವನಂತಪುರ : ಬಿಸಿಲ ಬೇಗೆಯಿಂದ ಮುಕ್ತಿ ಕಾಣಲು ರಾಜ್ಯದಲ್ಲಿ ಇಂದು ರಾತ್ರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಪ್ರಕಟಿಸಿದೆ. ಪತ್ತನಂತ್ತಿಟ್ಟ, ಕೊಟ್ಟಾಯಂ, ಇಡುಕ್ಕಿ ಮತ್ತು ಎರ್ನಾಕುಲಂ ಜಿಲ್ಲೆಗಳಲ್ಲಿ ಇಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆಯೊಂದಿಗೆ ಬಲವಾದ ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಜಾಗರೂಕರಾಗಿರಲು ಸೂಚಿಸಲಾಗಿದೆ.
ಭಾನುವಾರದವರೆಗೆ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಭಾನುವಾರದ ವೇಳೆಗೆ ದಕ್ಷಿಣ ಕೇರಳದಲ್ಲಿ ಮಳೆ ಕೇಂದ್ರೀಕೃತವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ತಿರುವನಂತಪುರ, ಕೊಲ್ಲಂ, ಪತ್ತನಂತಿಟ್ಟ ಮತ್ತು ಆಲಪ್ಪುಳ ಜಿಲ್ಲೆಗಳಿಗೆ ಎಚ್ಚರಿಕೆ ನೀಡಲಾಗಿದೆ.

0 Comments