ಮಂಗಳೂರು : ಕುತ್ತಾರು ಜಂಕ್ಷನ್ ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣದ ವಿಚಾರದಲ್ಲಿ ಭದ್ರತಾ ಸಿಬ್ಬಂದಿಯನ್ನು ತಳ್ಳಿ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಘೇರಾವ್ ಹಾಕಿ ತರಾಟೆಗೈದ ಮದನಿ ನಗರದ ಜುನೈದ್ ಮತ್ತು ಆತನ ಹತ್ತು ಜನ ಸಹಚರರ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಸ್ಪೀಕರ್ ಯು.ಟಿ.ಖಾದರ್ ಅವರ ಅಂಗ ರಕ್ಷಕ ಸಿಎಸ್ ಆರ್ ಘಟಕದ ಸಿಬ್ಬಂದಿ ಮೊಹಮ್ಮದ್ ಯಾಸೀನ್ ಇನಾಮದಾರ ನೀಡಿರುವ ದೂರಿನ ಆಧಾರದಡಿ ಉಳ್ಳಾಲ ಠಾಣೆಯಲ್ಲಿ ಹನ್ನೊಂದು ಜನ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಕಳೆದ ಮೇ 7 ರ ಗುರುವಾರ ರಾತ್ರಿ 10 ಗಂಟೆ ವೇಳೆ ಸ್ಪೀಕರ್ ಯು.ಟಿ.ಖಾದರ್ ಅವರು ಉಳ್ಳಾಲ ಮಾಸ್ತಿಕಟ್ಟೆಯ ರೆಸಾರ್ಟ್ ಒಂದರಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹಿಂತಿರುಗುವ ವೇಳೆ ಮದನಿ ನಗರದ ಜುನೈದ್ ಹಾಗೂ ಇತರ ಹತ್ತು ಮಂದಿ ಏಕಾಏಕಿ ಸ್ಪೀಕರ್ ಬಳಿ ಹೋಗುವಾಗ ಅಂಗರಕ್ಷಕರಾದ ಮೊಹಮ್ಮದ್ ಯಾಸೀನ ಅವರನ್ನು ತಡೆದಿದ್ದು, ಈಗಾಗಲೇ ಬಹಳ ತಡವಾಗಿದೆ ಎಂದು ಹೇಳಿ ಸ್ಪೀಕರ್ ಭೇಟಿಗೆ ಅವಕಾಶ ನಿರಾಕರಿಸಲಾಗಿತ್ತು.

0 Comments