ಕಾಸರಗೋಡು: ಮದುವೆಯಾದ ಕೇವಲ ಒಂದೂವರೆ ತಿಂಗಳಲ್ಲೇ ನವವಿವಾಹಿತೆಯೊಬ್ಬರು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕುತ್ತಿಕೋಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇತೂರುಪಾರದ ವಟ್ಟಂತಟ್ಟ ನಿವಾಸಿಯಾದ ಪುಷ್ಪಾ ಮತ್ತು ದಿ. ಸುಕುಮಾರನ್ ದಂಪತಿಯ ಪುತ್ರಿ ಅಶ್ವತಿ ಪಿ.ವಿ. (24) ಮೃತಪಟ್ಟ ದುರ್ದೈವಿ. ಇವರು ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇವರಿಗೆ ಕಳೆದ ಏಪ್ರಿಲ್ 5 ರಂದು ಪರಕ್ಕಲೈ ಬಳಿಯ ಚೀಟ್ಟಕ್ಕಾವು ಮೂಲದ ಹತ್ತಿರದ ಸಂಬಂಧಿ ರೂಪೇಶ್ ಎಂಬುವವರೊಂದಿಗೆ ವಿವಾಹವಾಗಿತ್ತು. ಅವರು ಮೇ 18 ರಂದು ಕಾಸರಗೋಡಿನ ಮನೆಯಲ್ಲಿ ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತಕ್ಷಣವೇ ಪರಿಯಾರಂನಲ್ಲಿರುವ ಕಣ್ಣೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಗುರುವಾರ ಕೊನೆಯುಸಿರೆಳೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಾಸರಗೋಡು ಪಟ್ಟಣ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಶ್ವತಿ ಅವರ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

0 Comments