Ticker

6/recent/ticker-posts

Ad Code

ಹೊಸ ಸರ್ಕಾರ ರಚನೆಯಾಗುವವರೆಗೆ ಸಿದ್ದರಾಮಯ್ಯ ಅವರು ಹಂಗಾಮಿ ಸಿಎಂ

 

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನು  ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌  ಅವರು ಇಂದು  ಸಂವಿಧಾನಬದ್ಧವಾಗಿ ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಲೋಕಭವನದಿಂದ ಅಧಿಕೃತ ಆದೇಶ ಹೊರಡಿಸಲಾಗಿದ್ದರೂ ಹೊಸ ಸರ್ಕಾರ ರಚನೆಯಾಗುವವರೆಗೆ ಸಿದ್ದರಾಮಯ್ಯ ಅವರು ಹಂಗಾಮಿ ಸಿಎಂ ಆಗಿ ಮುಂದುವರಿಯಲಿದ್ದಾರೆ. 

ರಾಜ್ಯಪಾಲರು ರಾಜಧಾನಿಯಲ್ಲಿ ಇಲ್ಲದ ಕಾರಣ, ಅವರ ಅನುಪಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಗುರುವಾರ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಹಸ್ತಾಂತರಿಸಿದ್ದರು. ರಾಜೀನಾಮೆ ಪತ್ರವನ್ನು ಕಾರ್ಯದರ್ಶಿಗಳು ಸ್ವೀಕರಿಸಿದ್ದರೂ, ಸಂವಿಧಾನದ ನಿಯಮಾವಳಿಗಳ ಪ್ರಕಾರ ರಾಜ್ಯಪಾಲರು ಖುದ್ದಾಗಿ ಸಹಿ ಮಾಡಬೇಕಿತ್ತು. ಗುರುವಾರ (ಮೇ 28) ರಾತ್ರಿ ಇಂದೋರ್‌ನಿಂದ ಬೆಂಗಳೂರಿಗೆ ಆಗಮಿಸಿದ್ದ ರಾಜ್ಯಪಾಲರು ಇಂದು ಬೆಳಗ್ಗೆಯೇ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಹೀಗಾಗಿ ಹೊಸ ಸರ್ಕಾರ ರಚನೆ ಪ್ರಕ್ರಿಯೆ ಜರೂರಾಗಿ ಸಾಗಿದೆ.

ರಾಜ್ಯಪಾಲರು ರಾಜೀನಾಮೆ ಅಂಗೀಕಾರ ಮಾಡಿರುವುದರಿಂದ ಶನಿವಾರ  ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ ಸಾಧ್ಯತೆಗಳಿವೆ. ಸಿಎಲ್‌ಪಿ ನಾಯಕರಾಗಿ ಡಿಕೆಶಿ ಆಯ್ಕೆಯಾಗುವುದು ಖಚಿತವಾಗಿದೆ. ಸೋಮವಾರ ಸಂಜೆ  ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿರುವರು ಎಂದು ತಿಳಿದು ಬಂದಿದೆ.

Post a Comment

0 Comments