ಲಕ್ನೊ : ಚಂಡಮಾರುತಕ್ಕೆ ಸಿಕ್ಕಿ ಬೆಟ್ಟಾ ನದಿಯ ಮೇಲೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 6 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗಲೆಂದು ನಿರ್ಮಿಸಿದ್ದ ಸೇತುವೆಯೇ ಈಗ ಜನರ ಜೀವಕ್ಕೆ ಸಂಚಕಾರ ತಂದಿದೆ. ಘಟನೆಯಲ್ಲಿ ಈವರೆಗೆ 6 ಕಾರ್ಮಿಕರು ಸಾವನ್ನಪ್ಪಿದ್ದು, ಇನ್ನೂ ಅನೇಕರು ಅವಶೇಷಗಳ ಅಡಿಯಲ್ಲೇ ಸಿಲುಕಿರುವ ಶಂಕೆ ಇದೆ. ಹೀಗಾಗಿ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

0 Comments