ಉಡುಪಿ : ಕೊಲ್ಲೂರು ಸಮೀಪದ ದಳಿ ಪ್ರದೇಶದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೇರಳ ಮೂಲದ ಮಹಿಳಾ ಯಾತ್ರಾರ್ಥಿಯೊಬ್ಬರ ಮೈಮೇಲಿದ್ದ ಚಿನ್ನಾಭರಣ ಕಳವು ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಕೊಲ್ಲೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಕೊಲ್ಲೂರು ಗ್ರಾಮದ ಕಲ್ಯಾಣಿಗುಡ್ಡೆ ನಿವಾಸಿ ಹೇಮಂತ್ (40) ಎಂದು ಗುರುತಿಸಲಾಗಿದೆ.
ಮೇ 17ರಂದು ಬೈಂದೂರು ತಾಲೂಕಿನ ಕೊಲ್ಲೂರು ಗ್ರಾಮದ ದಳಿ ಪ್ರದೇಶದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ಮಹಿಳಾ ಯಾತ್ರಾರ್ಥಿಗಳು ಮೃತಪಟ್ಟಿದ್ದರು. ಈ ಸಂಬಂಧ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಪಘಾತದಲ್ಲಿ ಮೃತಪಟ್ಟ ಮಹಿಳೆಯೊಬ್ಬರ ಮೈಮೇಲಿದ್ದ ಚಿನ್ನಾಭರಣಗಳನ್ನು ಯಾರೋ ಕಳವು ಮಾಡಿರುವ ಕುರಿತು ಶ್ರೀಕುಮಾರ ಎಂಬವರು ನೀಡಿದ ದೂರಿನ ಮೇರೆಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.

0 Comments