Ticker

6/recent/ticker-posts

Ad Code

ಮೇ 11ಕ್ಕೆ ಉಬ್ರಂಗಳ ಶ್ರೀ ಮಹಾದೇವ ಪಾರ್ವತಿ ಶ್ರೀ ಶಾಸ್ತಾರ ದೇವಸ್ಥಾನದ ಹಿತ್ತಾಳೆ ಕವಚದ 18 ಮೆಟ್ಟಿಲುಗಳ ಲೋಕಾರ್ಪಣೆ ಹಾಗೂ ಶ್ರೀ ದೇವರ ಭವ್ಯ ಮಹೋತ್ಸವ : ಪತ್ರಿಕಾಗೋಷ್ಠಿ


 ಕಾಸರಗೋಡು : ಬಡಗು ಶಬರಿಮಲೆ ಖ್ಯಾತಿಯ  ಉಬ್ರಂಗಳ ಶ್ರೀ ಮಹಾದೇವ ಪಾರ್ವತಿ ಶ್ರೀ ಶಾಸ್ತಾರ ದೇವಸ್ಥಾನದ ಹಿತ್ತಾಳೆ ಕವಚದ 18 ಮೆಟ್ಟಿಲುಗಳ ಲೋಕಾರ್ಪಣೆ ಹಾಗೂ ಶ್ರೀ ದೇವರ ಭವ್ಯ ಮಹೋತ್ಸವ ಮೇ.11ಕ್ಕೆ ಜರಗಲಿದೆ. ಇದರಂಗವಾಗಿ‌ ಕಾಸರಗೋಡು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪದಾಧಿಕಾರಿಗಳು ಭಾಗವಹಿಸಿ ಮೇ 11ರಂದು 101 ಚೆಂಡೆ ವಾದ್ಯಗಳೊಂದಿಗೆ ಹಿತ್ತಾಳೆ ಕವಚದ 18 ಮೆಟ್ಟಿಲುಗಳ ಲೋಕಾರ್ಪಣೆ ಹಾಗೂ ಶ್ರೀ ದೇವರ ಭವ್ಯ ಮಹೋತ್ಸವ ನಡೆಯಲಿದೆ ಎಂದು ತಿಳಿಸಿದರು. ಶ್ರೀ ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠಾಧೀಶರಾದ ಜಗದ್ಗುರು ಶ್ರೀ ಶಂಕರಾಚಾರ್ಯ ಮಹಾಸಂಸ್ಥಾನ ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳ ಕರಕಮಲ ಸಂಜಾತರಾದ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳಿಂದ ಹಾಗೂ ಜಗದ್ಗುರು ಶ್ರೀ ಶಂಕರಾಚಾರ್ಯ ಮಹಾಸಂಸ್ಥಾನ ಎಡನೀರು ಮಠಾಧೀಶರಾದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಈ ಪುಣ್ಯಕಾರ್ಯದ ಉದ್ಘಾಟನೆಗೈದು ಆಶೀರ್ವಚನ ನೀಡಲಿರುವರು. ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿ, ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು, ಶಬರಿಮಲೆ ಪಂದಳದ ಶ್ರೀ ನಾರಾಯಣ ವರ್ಮ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ ಎಂದರು. ಸಂಜೆ 5 ಗಂಟೆಗೆ ಧಾರ್ಮಿಕ ಸಭೆ, 6:30ರ ಶುಭ ಮುಹೂರ್ತದಲ್ಲಿ 18 ಮೆಟ್ಟಿಲುಗಳ ದ್ವಾರಪೂಜೆ ಹಾಗೂ ಲೋಕಾರ್ಪಣೆ ಹಾಗೂ ರಾತ್ರಿ 8 ಗಂಟೆಗೆ ಶ್ರೀ ದೇವರ ದಿವ್ಯ ಮಹೋತ್ಸವ ಹಾಗೂ ಭೋಜನ ಪ್ರಸಾದ ನಡೆಯಲಿರುವುದು.

ಸುದ್ದಿಗೋಷ್ಠಿಯಲ್ಲಿ ಶ್ರೀಕ್ಷೇತ್ರ ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ಕಿರಣ್ ಕುಮಾರ್ ಕುಣಿಕುಳ್ಳಾಯ, ಉತ್ಸವ ಸಮಿತಿ ಅಧ್ಯಕ್ಷ ಹರಿನಾರಾಯಣ ಮಾಸ್ಟರ್ ಶಿರಂತಡ್ಕ, ಪ್ರಚಾರ ಸಮಿತಿ ಅಧ್ಯಕ್ಷ ರಾಜೇಶ್ ಮಾಸ್ಟರ್ ಅಗಲ್ಪಾಡಿ, ಗೋವಿಂದರಾಜ್ ಮೈಲ್ಲೊಟ್ಟಿ ಉಪಸ್ಥಿತರಿದ್ದರು.

Post a Comment

0 Comments