Ticker

6/recent/ticker-posts

Ad Code

ಮೇ 30-31: ದ.ಕ. ಜಿಲ್ಲೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ

 

ಮಂಗಳೂರು : ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಮೇ 30 ಮತ್ತು 31ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮೇ 30 ರಂದು ಸಂಜೆ 4:25ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು 5:05ಕ್ಕೆ ಧರ್ಮಸ್ಥಳ ಹೆಲಿಪ್ಯಾಡ್ ನಲ್ಲಿ ಇಳಿದು  ಬಳಿಕ ಧರ್ಮಸ್ಥಳ ಅಥಿತಿಗೃಹದಲ್ಲಿ ವಾಸ್ತವ್ಯ ಹೂಡುವರು. ಮೇ 31ರ ಬೆಳಗ್ಗೆ 8 ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ , 11 ಗಂಟೆಗೆ ಬೆಳ್ತಂಗಡಿಯಲ್ಲಿ ಸಿರಿ ಇಂಡಸ್ಟ್ರೀಯಲ್ ಪಾರ್ಕ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 2.25ಕ್ಕೆ ಧರ್ಮಸ್ಥಳ ಹೆಲಿಪ್ಯಾಡ್, 3.05ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮನ, 3:15ಕ್ಕೆ ಉಪರಾಷ್ಟ್ರಪತಿಗಳು ಮಂಗಳೂರಿನಿಂದ ಕೇರಳದ ಕಣ್ಣೂರಿಗೆ ನಿರ್ಗಮಿಸಲಿದ್ದಾರೆ ಎಂದು ಪ್ರಕಟಣೆ  ತಿಳಿಸಿದೆ.

Post a Comment

0 Comments