Ticker

6/recent/ticker-posts

Ad Code

ರಾಜ್ಯದಲ್ಲಿ ಇಂದು ಕೂಡ ಭಾರೀ ಮಳೆಗೆ ಸಾಧ್ಯತೆ : ಕಾಸರಗೋಡು ಸಹಿತ ಒಂಬತ್ತು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್


 ತಿರುವನಂತಪುರ: ರಾಜ್ಯದಲ್ಲಿ ಇಂದು ಕೂಡ ಭಾರೀ ಮಳೆ ಮುಂದುವರೆಯಲಿದ್ದು ಕಾಸರಗೋಡು ಸಹಿತ ಒಂಬತ್ತು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ತಿರುವನಂತಪುರ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಎಚ್ಚರಿಕೆ ನೀಡಲಾಗಿದೆ.

ಕೇರಳದಲ್ಲಿ ಇನ್ನೆರಡು ದಿನಗಳ ಕಾಲ ವ್ಯಾಪಕ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಪ್ರತ್ಯೇಕ ಸ್ಥಳಗಳಲ್ಲಿ ಬಲವಾದ ಗಾಳಿ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಭಾರೀ ಗಾಳಿ ಮತ್ತು ಗುಡುಗು ಸಹಿತ ಮಳೆಯಾಗುವ ಲಕ್ಷಣಗಳಿದ್ದು ಸಾರ್ವಜನಿಕರು ಕಟ್ಟೆಚ್ಚರದಿಂದ ಇರುವಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

Post a Comment

0 Comments