Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಮಳೆಯಲ್ಲೂ ಬೆವರಿದ ಜನ ಸಾಮಾನ್ಯ : ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 29 ರೂ.ಏರಿಕೆ


ನವದೆಹಲಿ: ಗೃಹಬಳಕೆಯ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 29 ರೂ. ಏರಿಕೆಯಾಗಿದೆ.ಜಾಗತಿಕ ಇಂಧನ ಮಾರುಕಟ್ಟೆಯಲ್ಲಿನ ಏರಿಳಿತ ಮತ್ತು ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ತೈಲ ಕಂಪನಿಗಳು ಈ ನಿರ್ಧಾರ ಕೈಗೊಂಡಿದ್ದು ಇಂದಿನಿಂದಲೇ ಹೊಸ ದರಗಳು ಜಾರಿಗೆ ಬಂದಿವೆ.

ಕಳೆದ ಮೂರು ತಿಂಗಳಲ್ಲಿ ಅಡುಗೆ అనిల ದರ ಹೆಚ್ಚಳವಾಗಿರುವುದು ಇದು ಎರಡನೇ ಬಾರಿಯಾಗಿದೆ. ಇದಕ್ಕೂ ಮುನ್ನ ಮಾರ್ಚ್ 7 ರಂದು ಸಿಲಿಂಡ‌ರ್ ಬೆಲೆಯಲ್ಲಿ 60 ರೂ. ಏರಿಕೆ ಮಾಡಲಾಗಿತ್ತು. ಇದರೊಂದಿಗೆ ದೆಹಲಿಯಲ್ಲಿ ಇದುವರೆಗೆ 913 ಇದ್ದ ಸಿಲಿಂಡ‌ರ್ ಬೆಲೆ ಈಗ 942 ರೂ. ಕ್ಕೆ ತಲುಪಿದೆ.

 ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ ಮಾತನಾಡಿ, ದೇಶದಲ್ಲಿ ಎಲ್‌ಪಿಜಿ ಲಭ್ಯತೆಯನ್ನು ಸಮರ್ಪಕವಾಗಿ ಕಾಯ್ದುಕೊಳ್ಳಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದರು. ದೇಶೀಯ ಉತ್ಪಾದನೆ ಹೆಚ್ಚಿಸುವುದು, ಅಗತ್ಯ ಪ್ರಮಾಣದ ಆಮದು ಖಚಿತಪಡಿಸಿಕೊಳ್ಳುವುದು ಸೇರಿದಂತೆ ಹಲವು ಕ್ರಮಗಳ ಮೂಲಕ ಪೂರೈಕೆ ವ್ಯವಸ್ಥೆಯನ್ನು ಹೆಚ್ಚಿಸಲಾಗಿದೆ ಎಂದು ಅವರು ಹೇಳಿದರು. ಎಲ್‌ಪಿಜಿ ದರ ಏರಿಕೆ ದೇಶಾದ್ಯಂತ ಅನ್ವಯವಾಗಲಿದ್ದರೂ, ಸ್ಥಳೀಯ ತೆರಿಗೆಗಳು ಮತ್ತು ಸಾರಿಗೆ ವೆಚ್ಚಗಳ ವ್ಯತ್ಯಾಸದಿಂದ ವಿವಿಧ ನಗರಗಳಲ್ಲಿ ಬೆಲೆಯಲ್ಲಿ ಬದಲಾವಣೆ ಕಂಡುಬರಲಿದೆ.

ಜೂನ್ 1 ರಂದೇ 19 ಕೆಜಿಯ ವಾಣಿಜ್ಯ ಸಿಲಿಂಡ‌ರ್ ಬೆಲೆಯನ್ನು 42 ರೂ. ರಷ್ಟು ಹೆಚ್ಚಿಸಲಾಗಿತ್ತು. ಜಾಗತಿಕ ಮಾರುಕಟ್ಟೆಯ ಏರಿಳಿತದಿಂದಾಗಿ ಇತ್ತೀಚಿನ ವಾರಗಳಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಸಿಎನ್‌ಜಿ ದರಗಳಲ್ಲೂ ಸಹ ಏರಿಕೆಯಾಗಿದೆ.

Post a Comment

0 Comments


ಜಾಹೀರಾತು

Responsive Advertisement