Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ; ಕುಟುಂಬ ಪಾರು

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ವಾಹನ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಕುಟುಂಬದ ಸದಸ್ಯರು ಹೊರಬಂದ ಪರಿಣಾಮ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಕೋಟೆಕಾರಿನ ಮಸೂದ್ ಅವರು ಇತ್ತೀಚೆಗೆ ಖರೀದಿಸಿದ್ದ ಕಾರಿನಲ್ಲಿ ಕುಟುಂಬದೊಂದಿಗೆ ಮೂಡುಬಿದಿರೆಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಹಳೆ ಪುರಸಭೆ ಕಟ್ಟಡದ ಸಮೀಪ ವಾಹನ ಸಾಗುತ್ತಿದ್ದಾಗ ಕಾರಿನಿಂದ ಹೊಗೆ ಬರುತ್ತಿರುವುದನ್ನು ಗಮನಿಸಿ ತಕ್ಷಣ ವಾಹನವನ್ನು ನಿಲ್ಲಿಸಿ ಹೊರಗೆ ಇಳಿದಿದ್ದಾರೆ.

ಮಹಿಳೆಯರು ಮತ್ತು ಮಕ್ಕಳನ್ನು ಸುರಕ್ಷಿತವಾಗಿ ಹೊರಗೆ ಕರೆತಂದ ಕೆಲವೇ ಕ್ಷಣಗಳಲ್ಲಿ ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸಾರ್ವಜನಿಕರ ಸಹಕಾರದೊಂದಿಗೆ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.

ಪ್ರಾಥಮಿಕ ಮಾಹಿತಿಯ ಪ್ರಕಾರ, ಕಾರಿನ ಫಾಗ್ ಲೈಟ್ ಭಾಗದಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷವೇ ಬೆಂಕಿಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮೂಡುಬಿದಿರೆ ಪೊಲೀಸರು ಪರಿಶೀಲನೆ ನಡೆಸಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.


Post a Comment

0 Comments



ಜಾಹೀರಾತು

Responsive Advertisement