ಪೆರ್ಲ : 14.10 ಗ್ರಾಂ ಗಾಂಜಾ ಸಹಿತ ಕನ್ನಟಿಕಾನದ ಅಬ್ದುಲ್ ಶಮೀರ್ (34) ಎಂಬವರನ್ನು ಬಂಧಿಸಲಾಗಿದೆ. ನಿನ್ನೆ ಸಂಜೆ ಸ್ವರ್ಗದಲ್ಲಿ ಗಸ್ತು ತಿರುಗುತ್ತಿದ್ದ ಬದಿಯಡ್ಕ ಎಸ್‌ಐ ರೂಪೇಶ್ ನೇತೃತ್ವದ ಪೊಲೀಸ್ ತಂಡ ಸ್ವರ್ಗ ಶಿವಗಿರಿ ರಸ್ತೆಯಲ್ಲಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಯುವಕನನ್ನು ತಡೆದು, ದೇಹ ತಪಾಸಣೆ ನಡೆಸಿದಾಗ ಪ್ಲಾಸ್ಟಿಕ್ ಕವರ್‌ನಲ್ಲಿ ಇಡಲಾಗಿದ್ದ ಗಾಂಜಾ ಪತ್ತೆಯಾಗಿದೆ. ಯುವಕನ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

0 Comments