ಸಾಂದರ್ಭಿಕ ಚಿತ್ರ
ವಿಟ್ಲ : ಅಕ್ರಮವಾಗಿ ಅಂಬರ್‌ಗ್ರೀಸ್ (ತಿಮಿಂಗಿಲ ವಾಂತಿ) ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ವಿಟ್ಲ ಪೊಲೀಸರು ಬಂಧಿಸಿ, ಅವರ ಬಳಿಯಿದ್ದ ಅಂಬರ್‌ಗ್ರೀಸ್, ಮೊಬೈಲ್ ಫೋನ್ ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತರನ್ನು ಬಂಟ್ವಾಳ ತಾಲೂಕಿನ ಕರೋಪಾಡಿ ನಿವಾಸಿ ಕುಮುದಾಕ್ಷ (27) ಹಾಗೂ ವಿಟ್ಲ ಕಸಬಾ ನಿವಾಸಿ ಧನು ಕುಮಾರ್ (32) ಎಂದು ಗುರುತಿಸಲಾಗಿದೆ.
ಜೂನ್ 24ರಂದು ವಿಟ್ಲ ಪೊಲೀಸ್ ಠಾಣೆಯ ಎಸ್‌ಐ ರಾಮಕೃಷ್ಣ ನೇತೃತ್ವದ ಪೊಲೀಸ್ ತಂಡ ಬೊಳಂತಿಮೊಗರು ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ದ್ವಿಚಕ್ರ ವಾಹನವನ್ನು ತಡೆದು ಪರಿಶೀಲನೆ ನಡೆಸಿತು. ಈ ವೇಳೆ ಆರೋಪಿಗಳ ಬಳಿ ಯಾವುದೇ ಕಾನೂನುಬದ್ಧ ಪರವಾನಿಗೆ ಇಲ್ಲದೆ ಸಾಗಿಸುತ್ತಿದ್ದ ಸುಮಾರು 5.73 ಗ್ರಾಂ ತೂಕದ ಅಂಬರ್‌ಗ್ರೀಸ್ ಪತ್ತೆಯಾಯಿತು.
ತಕ್ಷಣ ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು, ಅಂಬರ್‌ಗ್ರೀಸ್ ಜೊತೆಗೆ ಮೊಬೈಲ್ ಫೋನ್ ಹಾಗೂ ದ್ವಿಚಕ್ರ ವಾಹನವನ್ನು ಜಪ್ತಿ ಮಾಡಿದ್ದಾರೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

0 Comments