ಪೆರ್ಲ: ಜಿಲ್ಲೆಯ ಶಿಕ್ಷಣ ಕ್ಷೇತ್ರದಲ್ಲಿನ ಅತ್ಯುತ್ತಮ ಸಾಧನೆಗೈದ ಶಾಲೆಗಳು ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗೌರವಿಸುವ ನಿಟ್ಟಿನಲ್ಲಿ ಕಾಸರಗೋಡು ಜಿಲ್ಲಾ ಪಂಚಾಯಿತಿ ಮತ್ತು ಸ್ಥಳೀಯಾಡಳಿತ ಇಲಾಖೆ ಕಾಸರಗೋಡು ನಗರಸಭಾಂಗಣದಲ್ಲಿ ಜಂಟಿಯಾಗಿ ಆಯೋಜಿಸಿದ 'ಮಿಕಾವ್ 2026' ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 2025-26ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಶೇ. ನೂರು ಫಲಿತಾಂಶ ದಾಖಲಿಸಿಕೊಂಡಿರುವ ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢಶಾಲೆ ಮುಖ್ಯ ಶಿಕ್ಷಕ ಎನ್. ಕೇಶವ ಪ್ರಕಾಶ್ ಅವರು ಕಾಸರಗೋಡು ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್ ಅವರಿಂದ ಪ್ರಶಸ್ತಿಫಲಕ ಸ್ವೀಕರಿಸಿದರು. ಕಾಸರಗೋಡು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಾಬು ಅಬ್ರಹಾಂ, ವಿಎಚ್‌ಎಸ್‌ಇ ಸಹಾಯಕ ನಿರ್ದೇಶಕಿ ಉದಯಕುಮಾರಿ ಇ.ಆರ್ ಮೊದಲಾದವರು ಉಪಸ್ಥಿತರಿದ್ದರು.

0 Comments