ಚೆನ್ನೈ: ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ರೈತರಿಗೆ ಬಂಪರ್ ಕೊಡುಗೆಯೊಂದನ್ನು ಘೋಷಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ. ವರೆಗಿನ ಬೆಳೆ ಸಾಲವನ್ನ ಸಂಪೂರ್ಣ ಮನ್ನಾ ಮಾಡುವುದಾಗಿ ತಿಳಿಸಿದ್ದಾರೆ. ಇದರೊಂದಿಗೆ 75,000 ರೂ.ಗಿಂತಲೂ ಹೆಚ್ಚು ಬೆಳೆ ಸಾಲ ಪಡೆದ ರೈತರಿಗೆ 35,000 ರೂ. ವರೆಗಿನ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ. ಪರಿಷ್ಕೃತ ಯೋಜನೆಯ ಪ್ರಕಾರ, 2025 ರ ಮೇ 1 ರಿಂದ 2026ರ ಫೆ.28 ರ ಅವಧಿಯಲ್ಲಿ ಸಹಕಾರಿ ಬ್ಯಾಂಕುಗಳಿಂದ ಪಡೆದ ಸಾಲಗಳಿಗೆ ಈ ಮನ್ನಾ ಯೋಜನೆ ಅನ್ವಯವಾಗಲಿದೆ.