Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಬಸ್ : ತಪ್ಪಿದ ದುರಂತ

 

ಶಿವಮೊಗ್ಗ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ  ಖಾಸಗಿ ಬಸ್  ಧಗಧಗನೇ ಹೊತ್ತಿ ಉರಿದ ಘಟನೆ ಶಿವಮೊಗ್ಗ- ಉಡುಪಿಯ ಗಡಿಭಾಗದ ಹುಲಿಕಲ್ ಘಾಟ್‌ನಲ್ಲಿ  ನಡೆದಿದೆ. ಶಿವಮೊಗ್ಗದ ಹೊಸನಗರ ತಾಲೂಕಿನ ಮಾಸ್ತಿಕಟ್ಟೆ  ಬಳಿಯ ಹುಲಿಕಲ್ ಘಾಟ್‌ನಲ್ಲಿ ಘಟನೆ ನಡೆದಿದ್ದು, ಅಗ್ನಿ ಅವಘಡದಲ್ಲಿ 17 ಜನ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಶಾರ್ಟ್ ಸರ್ಕ್ಯೂಟ್ ಆಗುತ್ತಿದ್ದಂತೆ ಪ್ರಯಾಣಿಕರನ್ನು  ಚಾಲಕ ಹಾಗೂ ನಿರ್ವಾಹಕ ಕೆಳಗಿಳಿಸಿದ್ದಾರೆ. ಖಾಸಗಿ ಬಸ್ ಸಂಪೂರ್ಣ ಸುಟ್ಟು ಹೋಗಿದೆ. ಬಸ್ ಶಿವಮೊಗ್ಗದ ಹುಲಿಕಲ್‌ನಿಂದ ಉಡುಪಿಗೆ ತೆರಳುತ್ತಿತ್ತು.  ಹುಲಿಕಲ್‌ನಿಂದ ಹೊರಟ ಬಸ್ ಕೆಲವು ಕಿ.ಮೀ ಸಾಗುವಷ್ಟರಲ್ಲೇ ಅಗ್ನಿ ಅವಘಡ ಸಂಭವಿಸಿದೆ. 

ಘಟನಾ ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದಾಗಿ  ಹುಲಿಕಲ್ ಘಾಟ್‌ನಲ್ಲಿ  ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

Post a Comment

0 Comments


ಜಾಹೀರಾತು

Responsive Advertisement