Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಲಗೇಜ್ ಬ್ಯಾಗ್‌ನಲ್ಲಿ ಡ್ರಗ್ಸ್ ಸಾಗಾಟ: ಮೂವರು ನೈಜೀರಿಯಾ ಪ್ರಜೆಗಳ ಬಂಧನ; ₹21 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ

 

ಬೆಂಗಳೂರು : ಮಾದಕದ್ರವ್ಯ ಜಾಲದ ವಿರುದ್ಧ ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳುತ್ತಿರುವ ನಡುವೆಯೇ, ಬೆಂಗಳೂರಿನಲ್ಲಿ ಭಾರೀ ಪ್ರಮಾಣದ ಡ್ರಗ್ಸ್ ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ.

ಲಗೇಜ್ ಬ್ಯಾಗ್‌ಗಳಲ್ಲಿ ಅಡಗಿಸಿಟ್ಟುಕೊಂಡು ಮಾದಕ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದ ಮೂವರು ನೈಜೀರಿಯಾ ಪ್ರಜೆಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು ₹21 ಕೋಟಿ ಮೌಲ್ಯದ 10 ಕೆಜಿ 270 ಗ್ರಾಂ ಎಂಡಿಎಂಎ ಕ್ರಿಸ್ಟಲ್‌, ನಾಲ್ಕು ಮೊಬೈಲ್ ಫೋನ್‌ಗಳು, ಎರಡು ದ್ವಿಚಕ್ರ ವಾಹನಗಳು ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಾಥಮಿಕ ತನಿಖೆಯಲ್ಲಿ, ಆರೋಪಿಗಳು ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಬೈಲಕೊನೆಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರೆಂಬುದು ತಿಳಿದುಬಂದಿದೆ. ವಿದ್ಯಾರ್ಥಿಗಳು ಹಾಗೂ ಐಟಿ ಉದ್ಯೋಗಿಗಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್ ಮಾರಾಟ ನಡೆಸುತ್ತಿದ್ದರು ಎನ್ನಲಾಗಿದೆ.

ಮೆಡಿಕಲ್ ಹಾಗೂ ಟೂರಿಸ್ಟ್ ವೀಸಾದಡಿ ಬೆಂಗಳೂರಿಗೆ ಬಂದಿದ್ದ ಆರೋಪಿಗಳು, ನೈಜೀರಿಯಾದಲ್ಲಿರುವ ಇತರ ಡ್ರಗ್ ಪೆಡ್ಲರ್‌ಗಳ ಮೂಲಕ ಎಂಡಿಎಂಎ ಕ್ರಿಸ್ಟಲ್‌ಗಳನ್ನು ತರಿಸಿಕೊಂಡು ನಗರದಲ್ಲಿ ಮಾರಾಟ ಮಾಡುತ್ತಿದ್ದರು. ಅಲ್ಲದೆ, ವೀಸಾ ಅವಧಿ ಮುಗಿದಿದ್ದರೂ ಅನಧಿಕೃತವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಸಂಗತಿಯೂ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಈ ಜಾಲದ ಹಿಂದೆ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಕುರಿತು ಸಿಸಿಬಿ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

Post a Comment

0 Comments

ಜಾಹೀರಾತು

Responsive Advertisement