ಕಾಸರಗೋಡು: 'ಆಪರೇಷನ್ ತೂಫಾನ್' ಹಿನ್ನೆಲೆಯಲ್ಲಿ ಪೊಲೀಸರು ನಡೆಸಿದ ದಾಳಿಯಲ್ಲಿ ಪಟ್ಲದಲ್ಲಿ ಭಾರಿ ಪ್ರಮಾಣದ ಮಾದಕ ವಸ್ತುಗಳೊಂದಿಗೆ ಓರ್ವನನ್ನು ಬಂಧಿಸಲಾಗಿದೆ. ಕಾರಿನಲ್ಲಿ ಸಾಗಿಸುತ್ತಿದ್ದ 21,873 ಪ್ಯಾಕೆಟ್ ನಿಷೇಧಿತ ತಂಬಾಕು ಉತ್ಪನ್ನಗಳೊಂದಿಗೆ ಮಧೂರು ಪಟ್ಲ ಲಕ್ಷಂವೀಡು ಕಾಲೋನಿಯ ಕೆ. ಇಬ್ರಾಹಿಂ ಬಾತ್ಷಾ (36)ನನ್ನು ಬಂಧಿಸಲಾಗಿದೆ.. ನಿಷೇಧಿತ ಪಾನ್ ಮಸಾಲಾ, ಸಾಗಾಟಕ್ಕೆ ಬಳಸಿದ್ದ ಕಾರು ಮತ್ತು ಮಾರಾಟದಿಂದ ಬಂದ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮಂಗಳವಾರ ಮಧ್ಯಾಹ್ನ ವಿದ್ಯಾನಗರ ಸಬ್ ಇನ್ಸ್‌ಪೆಕ್ಟರ್ ಎಸ್. ಅನೂಪ್ ಮತ್ತು ತಂಡ ನಡೆಸಿದ ತಪಾಸಣೆಯ ವೇಳೆ ಈ ನಿಷೇಧಿತ ತಂಬಾಕು ಉತ್ಪನ್ನಗಳು ಪತ್ತೆಯಾಗಿವೆ. 'ಆಪರೇಷನ್ ತೂಫಾನ್' ವಿಶೇಷ ಕಾರ್ಯಾಚರಣೆಯ ಭಾಗವಾಗಿ ಸ್ಟೇಷನ್ ವ್ಯಾಪ್ತಿಯಲ್ಲಿ ವಾಹನ ತಪಾಸಣೆ ನಡೆಸಲಾಗುತ್ತಿತ್ತು. ಈ ವೇಳೆ ಪಟ್ಲ ಶಾಲೆಯ ಸಮೀಪ ರಸ್ತೆ ಬದಿಯಲ್ಲಿ ಅನುಮಾನಾಸ್ಪದವಾಗಿ ನಿಲ್ಲಿಸಲಾಗಿದ್ದ ಕಾರನ್ನು ತಪಾಸಣೆ ನಡೆಸಿದಾಗ ಕಾರಿನೊಳಗೆ ಚೀಲಗಳು ಇರುವುದು ಕಂಡುಬಂದಿದೆ. ಕೂಡಲೇ ಡಾಗ್ ಸ್ಕ್ವಾಡ್ ಹಾಗೂ ಸ್ಥಳೀಯರ ಸಹಾಯದಿಂದ ಕಾರಿನ ಹಿಂಬದಿಯ ಸೀಟಿನಲ್ಲಿ ಬಚ್ಚಿಟ್ಟಿದ್ದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಯಿತು. ಕಾರಿನ ಡ್ಯಾಶ್‌ಬೋರ್ಡ್‌ನಲ್ಲಿ ಇರಿಸಲಾಗಿದ್ದ 1,040 ರೂಪಾಯಿ ನಗದನ್ನೂ ಸಹ ವಶಪಡಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆಯಲ್ಲಿ ಜೂನಿಯರ್ ಎಸ್.ಐ ಉಮೇಶನ್, ಸಿ.ಪಿ.ಒ ಗಳಾದ ರಮೇಶ್, ನಜೇಶ್ ಮತ್ತು ಬಿನು ಪಾಲ್ಗೊಂಡಿದ್ದರು.

0 Comments