Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಕುಡಿದ ಮತ್ತಿನಲ್ಲಿ ಪೋನ್ ಮಾಡಿ ಮುಖ್ಯಮಂತ್ರಿ ವಿ.ಡಿ.ಸತೀಶನ್ ಹಾಗೂ ಅವರ ಕುಟುಂಬಕ್ಕೆ ಕೊಲೆ ಬೆದರಿಕೆ : ಆರೋಪಿ ಬಂಧನ

 


ತಿರುವನಂತಪುರ: ಕೇರಳದ ಮುಖ್ಯಮಂತ್ರಿ ವಿ.ಡಿ.ಸತೀಶನ್ ಮತ್ತು ಅವರ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅಟ್ಟಿಂಗಲ್ ನಿವಾಸಿ ಸೋನಿ ಥಾಮಸ್ ಎಂದು ಗುರುತಿಸಲಾಗಿದೆ.

ಶುಕ್ರವಾರ ಸಂಜೆ 6:50 ರ ಸುಮಾರಿಗೆ ತಿರುವನಂತಪುರ ನಗರ ಜಿಲ್ಲಾ ಪೊಲೀಸ್ ಕಮಾಂಡ್ & ಕಂಟ್ರೋಲ್ ಸೆಂಟರ್‌ಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿದ್ದ. ಈ ವೇಳೆ ಆತ ವಿ.ಡಿ.ಸತೀಶನ್ ಹಾಗೂ ಅವರ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದ್ದಾನೆ. ಈ ಕಡೆಯಿಂದ ಮಾತನಾಡುತ್ತಿದ್ದ ಅಧಿಕಾರಿ ಕೊಲೆ ಬೆದರಿಕೆಗೆ ಕಾರಣವೇನೆಂದು ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ ಆರೋಪಿ, ನನಗೆ ಸತೀಶನ್ ಇಷ್ಟವಿಲ್ಲ ಎಂದು ಹೇಳಿರುವುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಇದಾದ ಬಳಿಕ 6:53 ಕ್ಕೆ ಆರೋಪಿ ಮತ್ತೊಮ್ಮೆ ಕರೆ ಮಾಡಿ ಪುನಃ ಬೆದರಿಕೆ ಹಾಕಿದ್ದಾನೆ. ಅಷ್ಟೇ ಅಲ್ಲದೇ, ಪೊಲೀಸ್ ಅಧಿಕಾರಿಗೆ ಅಸಭ್ಯ ಪದಗಳಿಂದ ನಿಂದಿಸಿದ್ದಾನೆ. ಮುಖ್ಯಮಂತ್ರಿಗಳಿಗೆ ಸೂಕ್ತ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆಯೇ ಅಂತ ಪ್ರಶ್ನಿಸಿದ್ದಾನೆ.

ತಕ್ಷಣವೇ ಎಚ್ಚೆತ್ತುಕೊಂಡ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬೆದರಿಕೆ ಕರೆ ಬಂದಿದ್ದ ಫೋನ್ ನಂಬರ್ ಆಧರಿಸಿ ತನಿಖೆ ಆರಂಭಿಸಿದ್ದಾರೆ. ಮೊಬೈಲ್ ಸಂಖ್ಯೆಯ ಸಿಗ್ನಲ್ ಟ್ರ್ಯಾಕ್‌ ಮಾಡಿ ಶನಿವಾರ ಬೆಳಗ್ಗೆ ಆರೋಪಿ ಥಾಮಸ್‌ನನ್ನು ಅಟ್ಟಿಂಗಲ್‌ನಲ್ಲಿ ವಶಕ್ಕೆ ಪಡೆದಿದ್ದಾರೆ. ಕರೆ ಮಾಡಿ ಬೆದರಿಕೆ ಹಾಕಿದ್ದ ವೇಳೆ ಆರೋಪಿ ಮದ್ಯದ ಅಮಲಿನಲ್ಲಿದ್ದ ಎಂದು ಪೊಲೀಸ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಬಂಧಿತ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಮನವಿ ಮಾಡಲಾಗುವುದು ಎಂದು ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ.

Post a Comment

0 Comments


ಜಾಹೀರಾತು

Responsive Advertisement