ದೆಹಲಿ : ದೆಹಲಿಯ ರೆಸ್ಟೋರೆಂಟ್ ಒಂದರಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಬೆಂಕಿ ಅವಘಡದಲ್ಲಿ 20 ಜನರು ಸಜೀವ ದಹನವಾಗಿದ್ದಾರೆ. ದೆಹಲಿಯ ಮಾಲ್ವಿಯಾ ನಗರದಲ್ಲಿ ಕಾಣಿಸಿಕೊಂಡ ಬೆಂಕಿ ಅವಘಡ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಸತ್ತವರಲ್ಲಿ ವಿದೇಶಿಯರು ಸೇರಿದ್ದಾರೆ ಎಂದು ವರದಿಯಾಗಿದೆ. ದಕ್ಷಿಣ ದೆಹಲಿಯ ಹೌಸ್ ರಾಣಿ ಪ್ರದೇಶದಲ್ಲಿರುವ ಬಹುಮಹಡಿ ಲೆಮನ್ ಗ್ರೀನ್ ರೆಸ್ಟೋರೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಳಿಗ್ಗೆ 9:45 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು ನಂತರ ಅಗ್ನಿಶಾಮಕ ದಳದವರು ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಅಗ್ನಿಶಾಮಕ ದಳ ಹಾಗೂ ಸ್ಥಳೀಯರ ನೆರವಿನಿಂದ 11 ಜನರನ್ನು ರಕ್ಷಿಸಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿ ಅಗ್ನಿಶಾಮಕ ಸೇವೆಗಳ ಪ್ರಕಾರ, ಆರಂಭದಲ್ಲಿ ರೆಸ್ಟೋರೆಂಟ್‌ನ ನೆಲಮಾಳಿಗೆಯಿಂದ ಮೂವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿ ಅನಾಹುತ ಎಲ್ಲಿಂದ ಹೇಗೆ ಸಂಭವಿಸಿದೆ ಎಂಬ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.ಈ ಬಗ್ಗೆ ಪ್ರಕರಣ ದಾಖಲಿಸಿದ ದೆಹಲಿ ಪೋಲಿಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

0 Comments