DEATH : ವಿದ್ಯುತ್ ಶಾಕ್ ತಗುಲಿ ನಾಲ್ಕು ವರ್ಷದ ಹೆಣ್ಣು ಮಗುವೊಂದು ಮೃತಪಟ್ಟಿರುವ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಕಲೀಗೌಡನಹಳ್ಳಿಯಲ್ಲಿ ಈ ದುರಂತ ಸಂಭವಿಸಿದೆ. ಸ್ಥಳೀಯ ನಿವಾಸಿಗಳಾದ ಪುಟ್ಟಮ್ಮ ಹಾಗೂ ಆನಂದ್ ದಂಪತಿಯ ಪುತ್ರಿ ಅದ್ವಿತಾ (4) ಮೃತಪಟ್ಟ ದುರ್ದೈವಿಯಾಗಿದ್ದಾಳೆ.
ಮನೆಯಲ್ಲಿ ಗೈಂಡರ್ ಆನ್ ಮಾಡಲಾಗಿದ್ದ ವೇಳೆ ಮಗು ಆಕಸ್ಮಿಕವಾಗಿ ಅದನ್ನು ಮುಟ್ಟಿದೆ ಎನ್ನಲಾಗಿದೆ. ಈ ವೇಳೆ ಗ್ರೇಂಡರ್‌ನಿಂದ ತೀವ್ರವಾಗಿ ವಿದ್ಯುತ್ ಪ್ರವಹಿಸಿದ್ದರಿಂದ ಮಗು ಸ್ಥಳದಲ್ಲೇ ಕುಸಿದು ಬಿದ್ದಿದೆ. ತಂದೆ-ತಾಯಿಯ ಕಣ್ಣೆದುರೇ ಈ ಘಟನೆ ನಡೆದಿದ್ದು, ಕ್ಷಣಾರ್ಧದಲ್ಲಿ ನಡೆದ ದುರಂತದಿಂದಾಗಿ ಮಗುವನ್ನು ರಕ್ಷಿಸಲು ಸಾಧ್ಯವಾಗಿಲ್ಲ. ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0 Comments