Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಗಡಿನಾಡಿನ ಮಕ್ಕಳಿಗೂ ಕರ್ನಾಟಕ ಸಾರಿಗೆ ಬಸ್ಸಿನಲ್ಲಿ ಉಚಿತ ಬಸ್ ಪಾಸ್ : ಸರಕಾರಕ್ಕೆ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಅಧ್ಯಕ್ಷರಿಂದ ಅಭಿನಂದನೆ


ಬೆಂಗಳೂರು: ರಾಜ್ಯದ ನಾಲ್ಕೂ ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಪ್ರಯಾಣಿಸುವ ರಾಜ್ಯದ ಶಾಲಾ ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ಗಳನ್ನು ವಿತರಿಸಲು ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದೆ.


ಗಡಿನಾಡಿನ ಮಕ್ಕಳಿಗೂ ಉಚಿತ ಬಸ್ ಪಾಸ್ ವಿತರಿಸುವಂತೆ ಪ್ರತ್ಯೇಕ ಉಲ್ಲೇಖಿಸಿದ್ದಕ್ಕಾಗಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ, ವತಿಯಿಂದ ಕರ್ನಾಟಕ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲಾಗಿದೆ. 

ಕರ್ನಾಟಕ ರಾಜ್ಯದಲ್ಲಿ ವಾಸವಿದ್ದು ನೆರೆರಾಜ್ಯದಲ್ಲಿ ವ್ಯಾಸಂಗ ಮಾಡುವ ಹಾಗೂ ನೆರೆರಾಜ್ಯದಲ್ಲಿ ವಾಸವಿದ್ದು ಕರ್ನಾಟಕದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಉಚಿತ ಬಸ್ ಪಾಸ್ ಸೌಲಭ್ಯ ಕಲ್ಪಿಸಲಾಗಿದ್ದು ಗಡಿನಾಡಾದ ಕಾಸರಗೋಡಿನ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಉತ್ತೇಜನ ನೀಡುವ ಈ ಮಹತ್ವದ ನಿರ್ಧಾರಕ್ಕಾಗಿ ಕರ್ನಾಟಕ ಸರ್ಕಾರಕ್ಕೆ ಹಾಗೂ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರಿಗೆ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಅಧ್ಯಕ್ಷ ಎನ್ ಚನಿಯಪ್ಪ ನಾಯ್ಕ್ ವಿಶೇಷ ಅಭಿನಂದನೆ ತಿಳಿಸಿದ್ದಾರೆ.

Post a Comment

0 Comments


ಜಾಹೀರಾತು

Responsive Advertisement