Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಭೀಕರ ರಸ್ತೆ ಅಪಘಾತ : ಮೂವರು ದಾರುಣ ಮೃತ್ಯು; ಹಲವರು ಗಂಭೀರ

ಕೊಲ್ಲಂ : ಇಂದು  ಬೆಳಗ್ಗೆ ನಡೆದ ಈ ಭೀಕರ ಅಪಘಾತವೊಂದರಲ್ಲಿ  ಮೂವರು ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದಾರೆ. ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಬಸ್‌ಗಾಗಿ ಕಾಯುತ್ತಿದ್ದ ಜನರ ಗುಂಪಿನೊಳಗೆ ನುಗ್ಗಿ ಉರುಳಿಬಿದ್ದಿತ್ತು. ಅಪಘಾತದಲ್ಲಿ ಕುಡವಟ್ಟೂರು ನಿವಾಸಿ ಹರಿಲಾಲ್ (54), ಕಾರ್ಮೆಲ್ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಪಾರ್ಥಿಪ್ ಹಾಗೂ ಕೆಎಸ್‌ಆರ್‌ಟಿಸಿ ನೌಕರ ಅಜಯನ್ ಮೃತಪಟ್ಟಿದ್ದಾರೆ. ಚಾಲಕ ನಿಸಾಂ (40) ಸೇರಿದಂತೆ ನವನೀತ್ (13), ರಿಷಾಫ್ (15), ಕುಶಾಲ್, ಋಷಭ್ ಬೋಬನ್ (15), ಜಿಬಿ ಮೋಲ್ (15) ಸೇರಿದಂತೆ ಹಲವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಎರಡು ರಸ್ತೆಗಳು ಸೇರುವ ತಿರುವಿನ ಬಳಿ ಓವರ್‌ಟೇಕ್ ಮಾಡಲು ಯತ್ನಿಸುವಾಗ ಟಿಪ್ಪರ್ ಎದುರು ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ಕಳೆದುಕೊಂಡು ಜನರ ನಡುವೆ ನುಗ್ಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ವಾಹನ ಅತಿವೇಗದಲ್ಲಿ ಸಂಚರಿಸುತ್ತಿತ್ತು ಎಂಬ ಆರೋಪವೂ ಕೇಳಿಬಂದಿದೆ. ಮೃತರ ಮರಣೋತ್ತರ ಪರೀಕ್ಷೆ ಕೊಟ್ಟಾರಕ್ಕರ ತಾಲೂಕು ಆಸ್ಪತ್ರೆಯಲ್ಲಿ ನಡೆಯಲಿದೆ.

ಅಪಘಾತ ಸಂಭವಿಸಿದ ಟಿಪ್ಪರ್ ಲಾರಿಯನ್ನು ಚಲಾಯಿಸುತ್ತಿದ್ದ ಚಾಲಕನ ಬಳಿ ಹೆವಿ ವಾಹನ ಚಾಲನಾ ಪರವಾನಗಿ (ಲೈಸೆನ್ಸ್) ಇರಲಿಲ್ಲ ಎಂದು ಮೋಟಾರು ವಾಹನ ಇಲಾಖೆ (ಎಂವಿಡಿ) ದೃಢಪಡಿಸಿದೆ. ವಿದೇಶದಿಂದ ಹಿಂದಿರುಗಿದ ಬಳಿಕ ಚಾಲಕ ಇದೇ ಮೊದಲ ಬಾರಿಗೆ ವಾಹನ ಚಲಾಯಿಸುತ್ತಿದ್ದ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಅಲ್ಲದೆ, ಲಾರಿಯ ಜಿಪಿಎಸ್ ವ್ಯವಸ್ಥೆ ಕಾರ್ಯನಿರ್ವಹಿಸುತ್ತಿರಲಿಲ್ಲ ಹಾಗೂ ವಾಹನದಲ್ಲಿ ಸ್ಪೀಡ್ ಗವರ್ನರ್ ಅಳವಡಿಸಿರಲಿಲ್ಲ ಎಂಬುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಲಾರಿಯ ಫಿಟ್ನೆಸ್ ಪ್ರಮಾಣಪತ್ರವನ್ನು ರದ್ದುಪಡಿಸಲಾಗಿದ್ದು, ಪರವಾನಗಿ (ಪರ್ಮಿಟ್) ರದ್ದುಗೊಳಿಸುವ ಪ್ರಕ್ರಿಯೆಯನ್ನೂ ಆರಂಭಿಸಲಾಗುವುದು ಎಂದು ಎಂವಿಡಿ ತಿಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಚಾಲಕನ ವಿರುದ್ಧ ಅಪರಾಧಿ ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾದ ಆರೋಪ ಸೇರಿದಂತೆ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿದ್ದಾರೆ. ಮೋಟಾರು ವಾಹನ ಇಲಾಖೆಯ ಅಂತಿಮ ವರದಿ ಲಭಿಸಿದ ಬಳಿಕ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Post a Comment

0 Comments



ಜಾಹೀರಾತು

Responsive Advertisement